ಹಟ್ಟಿಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಾಜಿ ಶಾಸಕ ಗೋಪಾಲ ಪೂಜಾರಿ ಭೇಟಿ

Spread the love

ಹಟ್ಟಿಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಾಜಿ ಶಾಸಕ ಗೋಪಾಲ ಪೂಜಾರಿ ಭೇಟಿ

ಕುಂದಾಪುರ: ಬೈಂದೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿಯವರು ಹಟ್ಟಿಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದರು.

ಹಳ್ಳಿಗಳಲ್ಲಿ ೪೫ ವರ್ಷಕ್ಕಿಂತ ಮೇಲ್ಪಟ್ಟವರಿಗೆ ಎಷ್ಟು ಲಸಿಕೆ ನೀಡಲಾಗಿದೆ ಹಾಗೂ ಬಾಕಿ ಇರುವ ಅಂಕಿಅAಶಗಳ ಬಗ್ಗೆ ಆಶಾ ಕಾರ್ಯಕರ್ತರ ಮೂಲಕ ಪಟ್ಟಿ ಮಾಡಿ ಅವರುಗಳಿಗೆ ಲಸಿಕೆ ಸಿಗುವಂತೆ ಮಾಡಬೇಕು ಎಲ್ಲಾ ಮನೆಗಳಿಗೆ ಕೊರೋನಾ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವಾಗಬೇಕು ಎಂದರು.

ಆರೋಗ್ಯ ಕೇಂದ್ರದಲ್ಲಿ ಎಲ್ಲಾ ಸಿಬ್ಬಂದಿಗಳು, ವೈದ್ಯರು ಉತ್ತಮ ಸೇವೆ ನೀಡುತ್ತಿದ್ದಾರೆ. ಅಲ್ಲದೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಶುಚಿತ್ವವಾಗಿಸಿಕೊಂಡು ಉತ್ತಮ ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ಹಾಗೂ ಸಿಬ್ಬಂದಿಯವರ ಕಾರ್ಯವನ್ನು ಶ್ಲಾಘಿಸಿದರು.

ಈ ಸಂದರ್ಭ ಗುಲ್ವಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಶ್ ಶೆಟ್ಟಿ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ರಾಜ್ ಶೆಟ್ಟಿ, ಗುಲ್ವಾಡಿ ಗ್ರಾಮ ಪಂಚಾಯತ್ ಸದಸ್ಯ ಚಂದ್ರ ಪೂಜಾರಿ, ಹಟ್ಟಿಯಂಗಡಿ ಗ್ರಾಮ ಪಂಚಾಯತ್ ಸದಸ್ಯ ಮಂಜುನಾಥ ಗುಡ್ಡೆಯಂಗಡಿ ಹಾಗೂ ಮಾಜಿ ಸದಸ್ಯರುಗಳಾದ ಮುತ್ತಯ್ಯ ಪೂಜಾರಿ ಕನ್ಯಾನ, ಸಂತೋಷ ಶೆಟ್ಟಿ ಸಬ್ಲಾಡಿ, ಕಾಂಗ್ರೆಸ್ ಮುಖಂಡ ನಾಗರಾಜ ಅಬ್ಬಿಗುಡ್ಡೆ ಉಪಸ್ಥಿತರಿದ್ದರು.


Spread the love