ಹಲವೆಡೆ ಭೂಕುಸಿತ: ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ

Spread the love

ಹಲವೆಡೆ ಭೂಕುಸಿತ: ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ

ಬೆಂಗಳೂರು: ಹಾಸನ ಜಿಲ್ಲೆಯ ಎಡಕುಮೇರಿ ಬಳಿ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತಗೊಂಡಿದೆ. ಹಾಸನ ರೈಲು ನಿಲ್ದಾಣದಿಂದ ಪ್ರಯಾಣಿಕರಿಗೆ ಕೆಎಸ್ಸಾರ್ಟಿಸಿ ಬಸ್‌ಗಳ ಮೂಲಕ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ.

ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್‌ (16515) ರೈಲಿನ ಸಂಚಾರವನ್ನು ಭಾಗಶಃ ರದ್ದುಪಡಿಸಲಾಗಿದೆ. ಈ ರೈಲು ಹಾಸನದಿಂದ ಮುಂದಕ್ಕೆ ಸಂಚರಿಸುವುದಿಲ್ಲ. 16576 ಸಂಖ್ಯೆಯ ಕಾರವಾರ-ಯಶವಂತಪುರ ರೈಲಿನ ಮಾರ್ಗ ಬದಲಿಸಲಾಗಿದ್ದು, ಶೋರ್ನೂರು ಮಾರ್ಗವಾಗಿ ಯಶವಂತಪುರ ತಲುಪಲಿದೆ.


Spread the love