ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನು ಭೇಟಿ ಮಾಡಿದ ಎನ್‌ಎಸ್‌ಯುಐ ರಾಜ್ಯಧ್ಯಕ್ಷ ಕೀರ್ತಿ ಗಣೇಶ್ 

Spread the love

ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನು ಭೇಟಿ ಮಾಡಿದ ಎನ್‌ಎಸ್‌ಯುಐ ರಾಜ್ಯಧ್ಯಕ್ಷ ಕೀರ್ತಿ ಗಣೇಶ್ 

ಮಂಗಳೂರು: ಪುತ್ತೂರಿನ ಕೊಂಬೆಟ್ಟು ಕಾಲೇಜಿನಲ್ಲಿ ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನು ಎನ್‌ಎಸ್‌ಯುಐ ರಾಜ್ಯಧ್ಯಕ್ಷ ಕೀರ್ತಿ ಗಣೇಶ್ ಅವರ ನಿಯೋಗ ಮಂಗಳವಾರ ಆಸ್ಪತ್ರೆಯಲ್ಲಿ ಭೇಟಿ ಮಾಡಿತು.

ಹಲ್ಲೆಗೊಳಗಾದ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಕೀರ್ತಿ ಗಣೇಶ್, ಮತೀಯ ಸಂಘಟನೆಗಳು ವಿದ್ಯಾರ್ಥಿಗಳನ್ನು ಪ್ರಚೋದಿಸುವ ಕೆಲಸ ಮಾಡುತ್ತಿದೆ. ವಿದ್ಯಾರ್ಥಿಗಳ ವಿಚಾರದಲ್ಲಿ ಹೊರಗಿನ ಸಂಘಟನೆಗಳು ಪ್ರವೇಶ ಮಾಡಿ ವಿದ್ಯಾರ್ಥಿಗಳಲ್ಲಿ ಕೋಮುವಿಷವನ್ನು ಬಿತ್ತುವ ಪ್ರಯತ್ನವನ್ನು ಎನ್‌ಎಸ್‌ಯುಐ ಖಂಡಿಸುತ್ತದೆ. ಆರೋಪಿಗಳ ಕೂಡಲೇ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುವುದಾಗಿ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ದ.ಕ ಎನ್‌ಎಸ್‌ಯುಐ ಅಧ್ಯಕ್ಷ ಸವಾದ್ ಸುಳ್ಯ, ರಾಜ್ಯ ಉಪಾಧ್ಯಕ್ಷರಾದ ಫಾರೂಕ್ ಬಯಾಬೆ, ನಮೃತಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಭರತ್ ರಾಮ್ ಗೌಡ ಇದ್ದರು.


Spread the love