
ಹಸ್ತಶಿಲ್ಪಿವತಿಯಿಂದ ಸಿಲ್ಕ್ ಇಂಡಿಯ-2022 – ಪರಿಶುದ್ಧ ರೇಷ್ಮೆ ಸೀರೆಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ
ಭಾರತವು ರೇಷ್ಮೆ ಉತ್ಪಾದನೆಯಲ್ಲಿ ಪ್ರಪಂಚದಲ್ಲಿಯೇ ಮುಂಚೂಣಿಯಲ್ಲಿದ್ದು, ಭಾರತದಲ್ಲಿ ಉತ್ಪಾದನೆಯಾಗುವ ರೇಷ್ಮೆಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಹಳ ಬೇಡಿಕೆಯಿರುತ್ತದೆ. ದೇಶದಲ್ಲಿ ವಾಯುಗುಣ ಮತ್ತು ನಿಸರ್ಗಕ್ಕೆ ಅನುಗುಣವಾಗಿ4 ವಿವಿಧ ಪ್ರಭೇದದ ರೇಷ್ಮೆಗಳಿದ್ದು ಅವುಗಳಲ್ಲಿ ತಸ್ಸರ್, ಎರಿ, ಮುಲ್ಬಾರಿ ಮತ್ತು ಮುಗಾ ರೇಷ್ಮೆಯ ಪ್ರಮುಖವಾಗಿದ್ದು, ಇದರಲ್ಲಿತಸ್ಸರ್ ಮತ್ತು ಮುಗಾ ರೇಷ್ಮೆಯು ಒಂದು ನೈಜವಾದ ಹಾಗೂ ಉಷ್ಣವಲಯದಲ್ಲಿ ಬೆಳೆಯುವ ವನ್ಯ ರೇಷ್ಮೆ ಹಾಗೂ ಸಾವಯವ (ಆರ್ಗಾನಿಕ್) ರೇಷ್ಮೆಯಾಗಿದೆ. ತಸ್ಸರ್ ಮತ್ತು ಮುಗಾ ರೇಷ್ಮೆಉತ್ಪಾದನೆಯಲ್ಲಿ ಅಸ್ಸಾಂ, ಬಿಹಾರ್ ಮತ್ತು ಛತ್ತಿಸ್ಗಡ್ ರಾಜ್ಯಗಳು ದೇಶದಲ್ಲಿ ಪ್ರಮುಖವಾಗಿದೆ.
‘ಹಸ್ತಶಿಲ್ಪಿ’ ಸಂಸ್ಥೆಯನ್ನು ಭಾರತದಲ್ಲಿರುವ ಕುಶಲಕರ್ಮಿಗಳು ಮತ್ತು ನೇಕಾರರ ಶ್ರೋಯೋಭಿವೃದ್ಧಿಗಾಗಿ ಮೈಸೂರಿನಲ್ಲಿ ಸ್ಥಾಪಿಸಲಾಗಿದೆ. ನೇಕಾರರು ಮತ್ತು ಕುಶಲಕರ್ಮಿಗಳು ಉತ್ಪಾದಿಸುವ ಉತ್ಪನ್ನಗಳಿಗೆ ದೇಶದ ಮುಖ್ಯ ನಗರಗಳಲ್ಲಿ ಮಾರಾಟ ಮೇಳವನ್ನು ಆಯೋಜಿಸುವ ಮೂಲಕ ನೇರವಾಗಿ ಅವರ ಉತ್ಪನ್ನಗಳು ಗ್ರಾಹಕರಿಗೆತಲುಪಿಸುವಂತೆ ವ್ಯವಸ್ಥೆ ಮಾಡುವುದು ಮತ್ತು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇಕಾರರೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭವನ್ನು ಹೆಚ್ಚು ಗಳಿಸುವಂತೆ ಮಾಡುವ ಉದ್ದೇಶವನ್ನು ಸಂಸ್ಥೆಯು ಹೊಂದಿದೆ. ಅದರಂತೆ ಮಂಗಳೂರಿನಲ್ಲಿ ಮದುವೆ ಮತ್ತು ಯುಗಾದಿ ಹಬ್ಬವನ್ನು ಗಮನದಲ್ಲಿಟ್ಟುಕೊಂಡು“ಸಿಲ್ಕ್ ಇಂಡಿಯ-2022” ಮೇಳವನ್ನು ದಿನಾಂಕ 18.03.2022 ರಿಂದ 27.03.2022ವರೆಗೆ 10 ದಿವಸಗಳ ಕಾಲ ‘ಹೋಟೆಲ್ ಮೋತಿ ಮಹಲ್, ಫಳ್ನಿರ್ ರಸ್ತೆ, ಮಂಗಳೂರುರÀಲ್ಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಮೇಳದಲ್ಲಿ ಕಾಶ್ಮೀರದಿಂದ ಕಾಂಚಿಪುರಂವರೆಗಿನ ರೇಷ್ಮೆಸೀರೆ ಉತ್ಪಾದಕರು, ರೇಷ್ಮೆ ಸೀರೆ ವಿನ್ಯಾಸಗಾರರು ಮತ್ತು ರೇಷ್ಮೆ ಸಹಕಾರ ಸಂಘಗಳು 60 ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ ತಮ್ಮ ರಾಜ್ಯದ ಸಾಂಪ್ರದಾಯಿಕ ರೇಷ್ಮೆ ಸೀರೆ ಮತ್ತು ಉತ್ಪನ್ನಗಳನ್ನು ಮಂಗಳೂರಿನಜನತೆಯ ಮುಂದೆಪ್ರತಿದಿನ ಬೆಳಿಗ್ಗೆ 10.30ರಿಂದರಾತ್ರಿ8.30ರವರೆಗೆ ಪ್ರದರ್ಶಿಸಿ ಮಾರಾಟ ಮಾಡುವರು.
ಮೇಳದಲ್ಲಿ ತಸ್ಸರ್ ರೇಷ್ಮೆ ಸೀರೆಗಳು, ಕ್ರೇಪ್, ಶಿಫಾನ್ ಮತ್ತು ಜಾರ್ಜೆಟ್ ಸಿಲ್ಕ್ ಸೀರೆಗಳು, ಮೈಸೂರು ರೇಷ್ಮೆ ಸೀರೆಗಳು, ಧರ್ಮಾವರಂ ಸೀರೆಗಳು,ಕಾಂಚಿಪುರಂ ಸಿಲ್ಕ್ ಮತ್ತು ಮದುವೆ ಸೀರೆಗಳು, ರಾ ಸಿಲ್ಕ್ ಮತ್ತು ಕೋಸಾ ಸೀರೆಗಳು, ಕಲ್ಕೊತ್ತಾ ಗಣಪತಿ ಸೀರೆಗಳು, ಢಾಕ ಸೀರೆಗಳು, ಡಿಸೈನರ್ ಎಂಬ್ರಾಯಿಡರಿ ಸೀರೆ ಮತ್ತು ಡ್ರೆಸ್, ಬಲ್ಚೂರಿ ರೇಷ್ಮೆ, ಮಟ್ಕಾ ಸೀರೆಗಳು, ಪ್ರೀಂಟೆಡ್ ಸೀರೆಗಳು, ಪಶ್ಮೀನಾ ಸೀರೆಗಳು, ಡಿಸೈನರ್ ಡ್ರೆಸ್ ಮೇಟಿರಿಯಲ್ಸ್ಗಳು ಮತ್ತು ಸೀರೆಗಳು, ಬಾಗಲ್ಪುರ್ ರೇಷ್ಮೆ ಸೀರೆ ಮತ್ತು ಡ್ರೆಸ್, ಉಪ್ಪಡಾ ಮತ್ತು ಗೊಡ್ವಾಲ್ ಸೀರೆಗಳು, ಮಹೇಶ್ವರಿ ಮತ್ತುಕೋಟಾ ಸಿಲ್ಕ್, ಟೆಂಪಲ್ ಬಾರ್ಡಾರ್ಉಳ್ಳ ಮುಲ್ಬಾರಿ ಸಿಲ್ಕ್, ಕಲ್ಕೋತ್ತಾರೇಷ್ಮೆ ಸೀರೆಗಳು, ಬನಾರಸ್ ಮತ್ತು ಜಮ್ದಾನಿ ರೇಷ್ಮೆ, ಶಿಫಾನ್ ಸೀರೆಗಳು, ಬುಟ್ಟಿ ಸೀರೆಗಳು, ಚಂದೇರಿ ಸಿಲ್ಕ್ ಮತ್ತು ಕೈ ಅಚ್ಚಿನ ಸೀರೆಗಳು ಪ್ರದರ್ಶನಗೊಳ್ಳಲಿದೆ. ಇದಲ್ಲದೆ ಕುರ್ತಾ, ಸ್ಟೋಲ್ಸ್, ಶಾಲುಗಳು, ಸಲ್ವಾರ್ ಕಮೀಜ್ ಮತ್ತು ಉಡುಪಿನ ಬಟ್ಟೆಗಳು, ಕುಶನ್ ಕವರ್ಗಳು ಮತ್ತು ಬೆಡ್ಶೀಟ್ಗಳನ್ನು ಈ ವಸ್ತುಪ್ರದರ್ಶನದಲ್ಲಿ ಪ್ರದರ್ಶಿಸಿ ಮಾರಾಟ ಮಾಡುವರು. ಈ ವಸ್ತುಗಳನ್ನು ಉತ್ವಾದಕರೆ ನೇರವಾಗಿ ಗ್ರಾಹಕರಿಗೆ ತಲುಪಿಸುತ್ತಿರುವುದರಿಂದ ವಸ್ತುಗಳು ನ್ಯಾಯಯುತ ಬೆಲೆಯಲ್ಲ್ಲಿ ದೊರಕುತ್ತದೆ.
ಆದುದರಿಂದ ಮಂಗಳೂರಿಗೆ ಭೇಟಿ ನೀಡುವ ಪ್ರವಾಸಿಗರು ಹಾಗೂ ಮಂಗಳೂರು ನಗರ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರು10 ದಿವಸಗಳ ಈ ವಿಶಿಷ್ಟ ಸಿಲ್ಕ್ ಇಂಡಿಯಾ ಮೇಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿಉತ್ಪಾದಕರನ್ನು ಪ್ರೋತ್ಸಾಹಿಸಬೇಕೆಂದು ಈ ಮೂಲಕ ಕೋರಲಾಗಿದೆ. ಮೇಳಕ್ಕೆ ಪ್ರವೇಶವನ್ನು ಉಚಿತವಾಗಿಕಲ್ಪಿಸಲಾಗಿದೆ.
ಸ್ಥಳ: ಹೋಟೆಲ್ ಮೋತಿ ಮಹಲ್, ಫಳ್ನೀರ್ ರಸ್ತ್ತೆ, ಮಂಗಳೂರು.ದೂರವಾಣಿ: 8660714252.