
Spread the love
ಹಾದಿ-ಬೀದಿ ಜಗಳ: ಸ್ಥಳ ನಿಯೋಜನೆ ಮಾಡದೆ ಡಿ. ರೂಪಾ, ರೋಹಿಣಿ ಸಿಂಧೂರಿ ವರ್ಗಾವಣೆ; ಮೌನೀಶ್ ಮೌದ್ಗಿಲ್ ಸಹ ಎತ್ತಂಗಡಿ
ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಕಿತ್ತಾಡಿಕೊಂಡು, ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆ ಮಾಡಲಾಗಿದೆ.
ಡಿ. ರೂಪಾ ಅವರ ಪತಿ, ಐಎಎಸ್ ಅಧಿಕಾರಿ ಮೌನೀಶ್ ಮೌದ್ಗಿಲ್ ಅವರನ್ನೂ ಸಹ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ನಿನ್ನೆಯಷ್ಟೇ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದ ಸರ್ಕಾರ, ಇಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಹಾಗೂ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಡಿ. ರೂಪಾ ಅವರಿಗೆ ಯಾವುದೇ ಹುದ್ದೆ ನೀಡದೆ ವರ್ಗಾವಣೆ ಮಾಡಿದೆ.
Spread the love