ಹಾಸ್ಟೆಲ್ ತೆರೆಯುವಂತೆ ಎಬಿವಿಪಿ ಮನವಿ

Spread the love

ಹಾಸ್ಟೆಲ್ ತೆರೆಯುವಂತೆ ಎಬಿವಿಪಿ ಮನವಿ

ಬೇಲೂರು: ರಾಜ್ಯದ ಹಿಂದುಳಿದ ವರ್ಗ ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತ ಇಲಾಖೆಯ ವ್ಯಾಪ್ತಿಯ ಎಲ್ಲ ಹಾಸ್ಟೆಲ್ ಗಳನ್ನು ತೆರೆಯಬೇಕೆಂದು ಎಬಿವಿಪಿಯಿಂದ ತಾಲೂಕು ಕಚೇರಿಯಲ್ಲಿ ತಹಸೀಲ್ದಾ ರ್ ಗೆ ಮನವಿ ಸಲ್ಲಿಸಲಾಯಿತು.

ಕೋವಿಡ್ 19 ಎರಡನೇ ಅಲೆಯಿಂದಾಗಿ ರಾಜ್ಯದ ಎಲ್ಲಾ ಹಾಸ್ಟೆಲ್ ಗಳು ಸೇರಿದಂತೆ ಎಲ್ಲಾ ಕಾಲೇಜುಗಳು ಕಳೆದ 3 – 4 ತಿಂಗಳುಗಳಿಂದ ಬಂದ್ ಆಗಿದ್ದವು. ಪ್ರಸ್ತುತ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂದಿನ ದಿನಗಳಲ್ಲಿ ರಾಜ್ಯದ ಸ್ನಾತಕ ಮತ್ತು ಸ್ನಾತಕೋತ್ತರ ತರಗತಿಗಳನ್ನು ಆರಂಭಿಸುವಂತೆ ಸಲಹೆ ನೀಡಿರುವುದರಿಂದ ರಾಜ್ಯದ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲ್ ಗಳಿಗೆ ಅವಲಂಭಿತರಾಗಿರುವುದರಿಂದ ಉನ್ನತ ಶಿಕ್ಷಣ ಇಲಾಖೆಯೂ ಈ ಇಲಾಖೆಗಳೊಂದಿಗೆ ಸಮನ್ವಯದೊಂದಿಗೆ ಸಂಬಂಧಪಟ್ಟ ಎಲ್ಲ ಕ್ರಮಗಳನ್ನು ತೆಗೆದುಕೊಂಡು ಸ್ಯಾನಿಟೈಸ್ ಮಾಡಿಸಿ ಹಾಸ್ಟೆಲ್ ಗಳನ್ನು ಪ್ರಾರಂಭಿಸಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಲ್ಲಿರಲು ಅವಕಾಶ ಮಾಡಿಕೊಡಬೇಕು ಮನವಿ ಮಾಡಿದ್ದಾರೆ .

ಕೋವಿಡ್ 19 ರ ನಿಯಮಾವಳಿಗಳನ್ನು ಗಮನದಲ್ಲಿಟ್ಟುಕೊಂಡು ಹಾಸ್ಟೆಲ್ ಗಳಲ್ಲಿ ತಂಗುವ ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಮೊದಲು ಆದ್ಯತೆ ನೀಡುವಂತೆ ಕ್ರಮ ಕೈಗೊಳ್ಳಬೇಕು. ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ತಕ್ಷಣವೇ ಬಸ್ ಪಾಸ್ ಸೌಲಭ್ಯ ಮಾಡಿಕೊಡಬೇಕಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಎಬಿವಿಪಿ ಯ ವಿದ್ಯಾರ್ಥಿ ಪ್ರಮುಖ್ ಗಿರೀಶ್, ಸಾಹಿತಿ ಎ. ಸಿ ನಿರಂಜನ್ . ಹೇಮಂತ್ ಹೆಚ್ ಎಂ ಗೌಡ, ಹರ್ಷ ಇದ್ದರು.


Spread the love