ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ಪಣ ತೊಟ್ಟಿರುವ ಮೋದಿ ನೇತೃತ್ವದ ಕೇಂದ್ರ ಸರಕಾರ : ಯಶ್ಪಾಲ್ ಸುವರ್ಣ

Spread the love

ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ಪಣ ತೊಟ್ಟಿರುವ ಮೋದಿ ನೇತೃತ್ವದ ಕೇಂದ್ರ ಸರಕಾರ : ಯಶ್ಪಾಲ್ ಸುವರ್ಣ

ದೇಶದ ಸ್ವಾತಂತ್ರ್ಯಗೊಂಡ 75 ವರ್ಷಗಳಲ್ಲಿ ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಪಣತೊಟ್ಟು ವಿವಿಧ ಯೋಜನೆಗಳನ್ನು ರೂಪಿಸಿ ಪರಿಣಾಮಕಾರಿ ಅನುಷ್ಠಾನಕ್ಕೆ ಮುಂದಾಗಿದ್ದು, ಕೇಂದ್ರ ಸಚಿವ ಸಂಪುಟದಲ್ಲಿ 27 ಮಂದಿ ಹಿಂದುಳಿದ ವರ್ಗಗಳ ಸಚಿವರಿಗೆ ಅವಕಾಶ ನೀಡುವ ಮೂಲಕ ದೇಶದ ಶೇ. 55 ಮತದಾರರನ್ನು ಹೊಂದಿರುವ ಹಿಂದುಳಿದ ವರ್ಗಕ್ಕೆ ಗರಿಷ್ಠ ರಾಜಕೀಯ ಪ್ರಾತಿನಿಧ್ಯ ನೀಡಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹೇಳಿದರು.

ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಆಯೋಜಿಸಿದ್ದ ಆಂಧ್ರಪ್ರದೇಶ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದರು.

ಕಾರ್ಯಕಾರಿಣಿ ಸಭೆಯಲ್ಲಿ ಆಂಧ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಸೋಮವೀರ ರಾಜು, ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿ ಡಾ ಪಾರ್ಥಸಾರಥಿಹಾಗೂ ಆಂಧ್ರ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷ ಗೋಪಿ ಶ್ರೀನಿವಾಸ್, ಮೋರ್ಚಾದ ಪದಾಧಿಕಾರಿಗಳು ಹಾಗೂ ಪಕ್ಷದ ವಿವಿಧ ಮುಖಂಡರು ಉಪಸ್ಥಿತರಿದ್ದರು.


Spread the love