ಹಿಂದೂ ಸಂಘಟನೆ ಮುಖಂಡ ಸುರೇಂದ್ರ ಬಂಟ್ವಾಳ್ ಹತ್ಯೆ

Spread the love

ಹಿಂದೂ ಸಂಘಟನೆ ಮುಖಂಡ ಸುರೇಂದ್ರ ಬಂಟ್ವಾಳ್ ಹತ್ಯೆ

ಮಂಗಳೂರು: ಚಲನಚಿತ್ರ ನಟ ಬಂಟ್ವಾಳ ನಿವಾಸಿ ಸುರೇಂದ್ರ ಬಂಟ್ವಾಳ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬುಧವಾರ ಸಂಭವಿಸಿದೆ.

ಸುರೇಂದ್ರ ಬಂಟ್ವಾಳ್ ಬಿಸಿರೋಡ್ ನಲ್ಲಿರುವ ತನ್ನ ಫ್ಲ್ಯಾಟ್ ನಲ್ಲಿ ವಾಸವಿದ್ದು ಬುಧವಾರ ಮಧ್ಯಾಹ್ನ ಸುಮಾರಿಗೆ ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಸಂಘಟನೆಗಳಲ್ಲಿ ಸುರೇಂದ್ರ ಬಂಟ್ವಾಳ್ ಅವರು ಸಕ್ರಿಯವಾಗಿ ತೊಡಗಿಕೊಂಡಿದ್ದರು.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.


Spread the love

1 Comment

Comments are closed.