ಹಿಜಾಬ್ ತೀರ್ಪು ಸಂವಿಧಾನಕ್ಕೆ ದೊರೆತ ಜಯ: ಶಾಸಕ ರಘುಪತಿ ಭಟ್

Spread the love

ಹಿಜಾಬ್ ತೀರ್ಪು ಸಂವಿಧಾನಕ್ಕೆ ದೊರೆತ ಜಯ: ಶಾಸಕ ರಘುಪತಿ ಭಟ್
 

ಉಡುಪಿ: ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ತೀರ್ಪನ್ನು ಸ್ವಾಗತಿಸುವುದಾಗಿ ಉಡುಪಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಸಮಿತಿ ಅಧ್ಯಕ್ಷ ಹಾಗೂ ಶಾಸಕರೂ ಆಗಿರುವ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

‘ಸಮವಸ್ತ್ರ ಕುರಿತು ಹೈಕೋರ್ಟ್‌ ತೀರ್ಪನ್ನು ಅತ್ಯಂತ ಸಂತೋಷದಿಂದ ಸ್ವಾಗತಿಸುತ್ತೇನೆ.

ತೀರ್ಪು ಸಂವಿಧಾನಕ್ಕೆ ಲಭಿಸಿದ ಜಯವಾಗಿದ್ದು, ಮತಾಂಧತೆ ಕೊನೆಯಾಗಲಿ, ಕಾನೂನಿನ ಪಾಲನೆಯಾಗಲಿ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ತೀರ್ಪು ಸ್ವಾಗತಾರ್ಹ- ಕುಯಿಲಾಡಿ ಸುರೇಶ್ ನಾಯಕ್: ರಾಜ್ಯದಾದ್ಯಂತ ವಿವಾದ ಸೃಷ್ಟಿಸಿದ್ದ ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪು ಸ್ವಾಗತಾರ್ಹ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಸರ್ಕಾರದ ವಸ್ತ್ರ ಸಂಹಿತೆಯ ಆದೇಶವನ್ನು ಎತ್ತಿಹಿಡಿದಿರುವ ಹೈಕೋರ್ಟ್, ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ಪಾಲನೆಯ ಪರವಾಗಿ ತೀರ್ಪು ನೀಡಿದೆ. ತೀರ್ಪು ಸಂವಿಧಾನಕ್ಕೆ ದೊರೆತ ಜಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.


Spread the love