ಹಿಜಾಬ್ ತೀರ್ಪು ಹಿನ್ನೆಲೆ, ದಕ ಜಿಲ್ಲೆಯಲ್ಲಿ ನಾಳೆ ಶಾಲಾ, ಕಾಲೇಜುಗಳಿಗೆ ರಜೆ

Spread the love

ಹಿಜಾಬ್ ತೀರ್ಪು ಹಿನ್ನೆಲೆ, ದಕ ಜಿಲ್ಲೆಯಲ್ಲಿ ನಾಳೆ ಶಾಲಾ, ಕಾಲೇಜುಗಳಿಗೆ ರಜೆ

ಮಂಗಳೂರು: ರಾಜ್ಯಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿರುವ ಹಿಜಾಬ್ ಪ್ರಕರಣದ ತೀರ್ಪನ್ನು ಹೈಕೋರ್ಟ್ ಮಾ.15ರಂದು ಪ್ರಕಟಿಸಲಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳಿಗೆ, ಅಂಗನವಾಡಿಗಳಿಗೆ ಮಾ.15ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಬಾಹ್ಯ ಪರೀಕ್ಷೆಗಳು ಇದ್ದರೆ ನಿಗದಿಯಂತೆ ನಡೆಯಲಿದ್ದು, ಆಂತರಿಕ ಪರೀಕ್ಷೆಗಳನ್ನು ಮುಂದೂಡುವಂತೆ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.


Spread the love