ಹಿಜಾಬ್ ವಿವಾದ: ಪ್ರತಿಭಟನಾ ನಿರತ‌ ಇಬ್ಬರು ವಿದ್ಯಾರ್ಥಿನಿಯರು ತರಗತಿಗೆ ಹಾಜರು

Spread the love

ಹಿಜಾಬ್ ವಿವಾದ: ಪ್ರತಿಭಟನಾ ನಿರತ‌ ಇಬ್ಬರು ವಿದ್ಯಾರ್ಥಿನಿಯರು ತರಗತಿಗೆ ಹಾಜರು

ಕುಂದಾಪುರ: ಹೈಕೋರ್ಟ್ ಐತಿಹಾಸಿಕ ತೀರ್ಪಿನ‌ ಬಳಿಕ‌ ತಾಲೂಕಿನಲ್ಲಿ ಮತ್ತೆ ಶಾಲಾ-ಕಾಲೇಜುಗಳು ಪುನರಾರಂಭಗೊಂಡಿದ್ದು, ಕುಂದಾಪುರದ ಜೂನಿಯರ್ ಕಾಲೇಜು ವ್ಯಾಪ್ತಿಯಲ್ಲಿ ಬಿಗುಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ಬುಧವಾರ ಶಾಂತಿಯುತವಾಗಿ ವಿದ್ಯಾರ್ಥಿಗಳು ತರಗತಿಗಳಿಗೆ ಆಗಮಿಸಿದ್ದಾರೆ. ಕುಂದಾಪುರದ ಜೂನಿಯರ್ ಕಾಲೇಜಿನಲ್ಲಿ ಹಿಜಾಬ್ ಧರಿಸಿ ತರಗತಿ‌ ಪ್ರವೇಶಕ್ಕೆ ಅವಕಾಶವಿಲ್ಲದ ಹಿನ್ನೆಲೆಯಲ್ಲಿ ಹನ್ನೊಂದು ವಿದ್ಯಾರ್ಥಿನಿಯರು ತರಗತಿಗೆ ಗೈರಾಗಿದ್ದಾರೆ. ಹಿಜಾಬ್ ಪರ ಹೋರಾಟ ನಿರತ ಇಬ್ಬರು ವಿದ್ಯಾರ್ಥಿಗಳು ತರಗತಿಗೆ ಆಗಮಿಸಿದ್ದು, ವಿದ್ಯಾರ್ಥಿಗಳಿಗೆ ಹಿಜಾಬ್ ತೆರವುಗೊಳಿಸಲು ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿನಿಯರು ಅಲ್ಲಿ ಹಿಜಾಬ್ ಕಳಚಿಟ್ಟು ತರಗತಿಗೆ ತೆರಳಿದ್ದಾರೆ. ಉಳಿದೆಡೆ ಸಾಮಾನ್ಯವಾಗಿ ಎಲ್ಲರೂ ಕಾಲೇಜಿಗೆ ಆಗಮಿಸಿದ್ದಾರೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಂತಿಮ‌ ಪರೀಕ್ಷೆಯ ತಯಾರಿಗಾಗಿ ರಜೆ ನೀಡಿರುವ ಹಿನ್ನೆಲೆ, ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಮಾತ್ರ ತರಗತಿಗೆ ಹಾಜರಾಗಿದ್ದಾರೆ.

 


Spread the love