ಹಿಟ್ & ರನ್’ಗೆ ಇಬ್ಬರ ಬಲಿ ಪ್ರಕರಣ! ‘ಯೂಟ್ಯೂಬರ್ ಅರ್ಪಿತ್ ಬಂಧನ

Spread the love

ಹಿಟ್ & ರನ್’ಗೆ ಇಬ್ಬರ ಬಲಿ ಪ್ರಕರಣ! ‘ಯೂಟ್ಯೂಬರ್ ಅರ್ಪಿತ್ ಬಂಧನ
 

ಮಂಗಳೂರು: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ-ಪಡುಪಣಂಬೂರು ರಾಷ್ಟ್ರೀಯ ಹೆದ್ದಾರಿಯ ಪೆಟ್ರೋಲ್ ಬಂಕ್ ಬಳಿ ಕಳೆದ ಮಂಗಳವಾರ ಮಧ್ಯರಾತ್ರಿ ಒಂದು ಗಂಟೆಯ ಸುಮಾರಿಗೆ ಹಿಟ್ ಆಂಡ್ ರನ್ ಗೆ ಇಬ್ಬರು ಬಲಿಯಾಗಿ ಒಬ್ಬ ಗಂಭೀರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿದ್ದ ಕಾರ್ ಚಾಲಕನನ್ನು ಮಂಗಳೂರು ಉತ್ತರ ಸಂಚಾರಿ ಠಾಣಾ ಪೊಲೀಸರು ಕಾರ್ ಸಮೇತ ವಶಕ್ಕೆ ಪಡೆದಿದ್ದು ಆತ ಜಾಮೀನು ಪಡೆದುಕೊಂಡಿರುವ ಮಾಹಿತಿ ಲಭಿಸಿದೆ.

ಆರೋಪಿಯನ್ನು ‘ಮ್ಯಾಡ್ ಇನ್ ಕುಡ್ಲ’ ಹೆಸರಿನ ಯೂಟ್ಯೂಬರ್ ಹಳೆಯಂಗಡಿ ಇಂದಿರಾ ನಗರ ನಿವಾಸಿ ಅರ್ಪಿತ್ (35) ಎಂದು ಗುರುತಿಸಲಾಗಿದೆ.

ಮಧ್ಯಪ್ರದೇಶದಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿಯ ಟೈರ್ ಪಂಕ್ಚರ್ ಆಗಿದ್ದು ಹೆದ್ದಾರಿ ಬದಿ ನಿಲ್ಲಿಸಿದ್ದ ವೇಳೆ ಆರೋಪಿ ಅರ್ಪಿತ್ ಇದ್ದ ಕಾರು ಅತಿವೇಗ ಮತ್ತು ಅಜಾಗರೂಕತೆಯಿಂದ ತೀರಾ ಎಡಗಡೆಗೆ ಬಂದು ಅಲ್ಲಿದ್ದವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಘಟನೆಯಲ್ಲಿ ಬಬುಲು (23), ಆಚಲ್ ಸಿಂಗ್ (30) ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಶವದ ಭಾಗಗಳು ಹೆದ್ದಾರಿ ತುಂಬಾ ಚೆಲ್ಲಾಡಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರು. ಘಟನೆಯಲ್ಲಿ ಕೇರಳ ನಿವಾಸಿ ಅನೀಶ್(42) ಗಂಭೀರ ಗಾಯಗೊಂಡಿದ್ದಾರೆ.


Spread the love