ಹಿರಿಯಡ್ಕ: ಬಾಲಕಿಗೆ ಲೈಂಗಿಕ ದೌರ್ಜನ್ಯ ಪೋಕ್ಸೊ ಕಾಯ್ದೆಯಡಿ ಆರೋಪಿ ಬಂಧನ

Spread the love

ಹಿರಿಯಡ್ಕ: ಬಾಲಕಿಗೆ ಲೈಂಗಿಕ ದೌರ್ಜನ್ಯ ಪೋಕ್ಸೊ ಕಾಯ್ದೆಯಡಿ ಆರೋಪಿ ಬಂಧನ

ಹಿರಿಯಡ್ಕ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಬೆಳಗಾವಿ ಮೂಲದ ವಲಸೆ ಕಾರ್ಮಿಕ ಪುಂಡಲಿಕ (21) ಎಂದು ಗುರುತಿಸಲಾಗಿದೆ
ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿರುವ ಆರೋಪಿಯು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಬಾಲಕಿ ಗರ್ಭಿಣಿಯಾಗಿದ್ದಾಳೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಾಧಿಕಾರಿ ದೂರು ನೀಡಿದ್ದರು.

ಪೊಲೀಸ್ ನಿರೀಕ್ಷಕ ಸಿ ಕಿರಣ್ ಮಾರ್ಗದರ್ಶನದಲ್ಲಿ ಮಹಿಳಾ ಠಾಣೆಯ ಉಪನಿರೀಕ್ಷಕಿ ವೈಲೆಟ್ ಫೆಮಿನಾ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ಉಡುಪಿಯ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.


Spread the love