ಹಿರಿಯ ಕಾಂಗ್ರೆಸ್ ಮುಖಂಡ ಇಗ್ನೇಷಿಯಸ್ ಡಿಸೋಜ, ಶಿರ್ವ ನಿಧನ

Spread the love

ಹಿರಿಯ ಕಾಂಗ್ರೆಸ್ ಮುಖಂಡ ಇಗ್ನೇಷಿಯಸ್ ಡಿಸೋಜ, ಶಿರ್ವ ನಿಧನ

ಉಡುಪಿ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಇಗ್ನೇಷಿಯಸ್ ಡಿಸೋಜ (70) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ  ರಾತ್ರಿ ಮಟ್ಟಾರಿನ ಸ್ವಗೃಹದಲ್ಲಿ ನಿಧನರಾದರು.

ಕೃಷಿಯಲ್ಲಿ ಬಿಎಸ್ಸಿ ಪದವಿ ಪಡೆದ ಇವರು, ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಹೊಸ ಪ್ರಯೋಗ ಮಾಡಿದ್ದರು. ಪತ್ನಿ, ಉಡುಪಿ ಧರ್ಮಪ್ರಾಂತ್ಯದ ಧರ್ಮಗುರು ಪ್ರಸ್ತುತ ಬೆಂಗಳೂರಿನ ಗುರುಮಠದಲ್ಲಿರುವ ಫಾ.ಸ್ಟಿವನ್ ಡಿಸೋಜ, ಉಡುಪಿ ನ್ಯಾಯವಾದಿ ಮೆಲ್ವಿನ್ ಡಿಸೋಜ ಸೇರಿದಂತೆ ಆರು ಮಂದಿ ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಪ್ರಸ್ತುತ ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದ ಇವರು, ಎಂಟು ವರ್ಷಗಳ ಕಾಲ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, ಉಡುಪಿ ತಾ.ಪಂ ಸದಸ್ಯ ಹಾಗೂ ಉಪಾಧ್ಯಕ್ಷರಾಗಿ, ಶಿರ್ವ ಗ್ರಾಪಂ ಅಧ್ಯಕ್ಷರಾಗಿ, ಶಿರ್ವ ಮಂಡಲ ಪ್ರಧಾನರಾಗಿ ಸೇವೆ ಸಲ್ಲಿಸಿದ್ದರು.


Spread the love