
Spread the love
ಹಿರಿಯ ಸಾಹಿತಿ ಡಾ. ಸಾರಾ ಅಬೂಬಕರ್ ನಿಧನ
ಮಂಗಳೂರು: ಹಿರಿಯ ಸಾಹಿತಿ, ಲೇಖಕಿ ಡಾ.ಸಾರಾ ಅಬೂಬಕರ್(87) ಮಂಗಳವಾರ ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ನಾಲ್ವರು ಪುತ್ರರು ಹಾಗೂ ಅಪಾರ ಬಂಧುಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.
ಮೂಲತಃ ಕಾಸರಗೋಡಿನ ಚಂದ್ರಗಿರಿ ತೀರದವರಾದ ಸಾರಾ ವಿವಾಹವಾದ ಬಳಿಕ ಮಂಗಳೂರಿನ ಹ್ಯಾಟ್ ಹಿಲ್ ಬಳಿ ವಾಸವಾಗಿದ್ದರು. ‘ಚಂದ್ರಗಿರಿ ತೀರದಲ್ಲಿ’ ಕಾದಂಬರಿಯ ಮೂಲಕ ಪ್ರಸಿದ್ಧಿಗೆ ಬಂದಿದ್ದ ಸಾರಾ ಅಬೂಬಕರ್ ಅನೇಕ ಕೃತಿಗಳನ್ನು ರಚಿಸಿ ಖ್ಯಾತರಾಗಿದ್ದರು. ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
Spread the love