
ಹೂಡೆ ಬೀಚ್‌ನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿ ಸಾವು: ಒಬ್ಬ ನಾಪತ್ತೆ
ಉಡುಪಿ: ಹೂಡೆ ಬೀಚ್‌ನಲ್ಲಿ ಭಾನುವಾರ ಈಜಲು ಹೋಗಿ ಅಲೆಗಳ ಸೆಳೆತಕ್ಕೆ ಸಿಲುಕಿ ತೀವ್ರ ಅಸ್ವಸ್ಥಗೊಂಡಿದ್ದ ಮಣಿಪಾಲದ ಎಂಐಟಿಯ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಒಬ್ಬ ವಿದ್ಯಾರ್ಥಿ ಸಮುದ್ರದ ಅಲೆಯಲ್ಲಿ ಕೊಚ್ಚಿಹೋಗಿದ್ದು ಶೋಧ ಕಾರ್ಯ ನಡೆಯುತ್ತಿದೆ.
ಬೆಂಗಳೂರಿನ ನಿಶಾಂತ್ ಹಾಗೂ ಚಿಂತಾಮಣಿಯ ಷಣ್ಮುಖ ಮೃತರು. ವಿಶಾಖಪಟ್ಟಣದ ಶ್ರೀಕರ್ ಗುಪ್ತ ನಾಪತ್ತೆಯಾದ ವಿದ್ಯಾರ್ಥಿ.
ವಾರಾಂತ್ಯದ ಹಿನ್ನೆಲೆಯಲ್ಲಿ ಸ್ನೇಹಿತರೆಲ್ಲ ಹೂಡೆ ಬೀಚ್‌ಗೆ ಬಂದು ಈಜುವಾಗ ಮೂವರು ಅಲೆಗಳ ಸೆಳೆತಕ್ಕೆ ಸಿಲುಕಿದ್ದರು. ಇದನ್ನು ಗಮನಿಸಿದ ಸ್ಥಳದಲ್ಲಿದ್ದವರು ಇಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಒಬ್ಬ ವಿದ್ಯಾರ್ಥಿ ಅಲೆಗಳ ಅಬ್ಬರಕ್ಕೆ ಸಿಲುಕಿ ಕೊಚ್ಚಿಹೋಗಿದ್ದ.
ವಿದ್ಯಾರ್ಥಿಗಳು ನೀರಿಗಿಳಿದಿದ್ದ ಜಾಗ ತೀರ ಅಪಾಯಕಾರಿ ಸ್ಥಳವಾಗಿದ್ದು, ಅಲೆಗಳ ಅಬ್ಬರ ಹೆಚ್ಚಾಗಿದ್ದರಿಂದ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.