ಹೆಚ್ಚಿನ ಜ್ಞಾನ ಸಂಪಾದಿಸಲು ವಿದ್ಯಾರ್ಥಿಗಳು ಸಂಶೋಧನೆ ನಡೆಸಬೇಕು: ಡಾ. ಕುರಿಯನ್

Spread the love

ಹೆಚ್ಚಿನ ಜ್ಞಾನ ಸಂಪಾದಿಸಲು ವಿದ್ಯಾರ್ಥಿಗಳು ಸಂಶೋಧನೆ ನಡೆಸಬೇಕು: ಡಾ. ಕುರಿಯನ್

ಮೂಡುಬಿದಿರೆ: ಎಲ್ಲಾ ವಿದ್ಯಾರ್ಥಿಗಳು ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು. ಆಗ ಮಾತ್ರ, ಯಾವುದೇ ವಿಷಯದ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಹೇಳಿದರು

ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಬಿ.ಎಸ್. ಡಬ್ಲ್ಯೂ ವಿಭಾಗದ ‘ಸ್ಪಟಿಕ’ ಫೆÇೀರಂ ಆಯೋಜಿಸಿದ ಸಂಶೋಧನಾ ಪ್ರಬಂಧ ಪ್ರಸ್ತುತಿ ಕಾರ್ಯಕ್ರಮದ ಅಧ್ಯಕ್ಷರಾಗಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಒಳ್ಳೆಯ ಕೌಶಲ್ಯವನ್ನು ಪಡೆಯಬೇಕು. ಅದರೊಂದಿಗೆ, ಸಂಶೋಧನೆಯಲ್ಲೂ ತೊಡಗಿಸಿಕೊಂಡಾಗ ಕಲಿತ ವಿಷಯದ ಕುರಿತು ಅವಲೋಕನ ನಡೆಸಿ, ನೈಜ ಜ್ಞಾನ ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಯಾವ ವಿಷಯದ ಕುರಿತು ಅಧ್ಯಯನ ಮಾಡುತ್ತೀರಿ ಎಂಬುದನ್ನು ಮೊದಲು ಸರಿಯಾಗಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಅರ್ಥಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಸುರತ್ಕಲ್‍ನ ಆಶಾ ಜ್ಯೋತಿ ಅಕಾಡೆಮಿ ನಿರ್ದೇಶಕ ಡಾ. ಅಜಿತ್ ಡಿಸೋಜ, ಯಾವುದೇ ಕೆಲಸದಲ್ಲಿ ಭಾಗವಹಿಸುವಿಕೆ ಅತ್ಯಗತ್ಯ. ಸಂಶೋಧನೆ ನಡೆಸುವಾಗ, ತೆಗೆದುಕೊಂಡ ವಿಷಯದ ಕುರಿತು ಆಳವಾದ ಜ್ಞಾನ ಹೊಂದಿರಬೇಕು. ಆ ವಿಷಯದ ವ್ಯಾಖ್ಯಾನ, ವಿಶ್ಲೇಷಣೆ ಮತ್ತು ಅದನ್ನು ಪ್ರಸ್ತುತಪಡಿಸುವ ಸಾಮಥ್ರ್ಯ ವಿದ್ಯಾರ್ಥಿಗಳಿಗೆ ಇರಬೇಕು ಎಂದರು.

ಸಭಾ ಕಾರ್ಯಕ್ರಮದ ಬಳಿಕ, ಆಳ್ವಾಸ್ ಸ್ನಾತಕೋತ್ತರ ಸಮಾಜ ಕಾರ್ಯ, ಪದವಿ ಸಮಾಜ ಕಾರ್ಯ ಮತ್ತ್ತು ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಪ್ರಬಂಧವನ್ನು ಮಂಡಿಸಿದರು.
ಕಾರ್ಯಕ್ರಮದಲ್ಲಿ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥೆ ಡಾ. ಮಧುಮಾಲಾ, ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶ್ರೀನಿವಾಸ ಹೊಡೆಯಾಲ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ನಿಸರ್ಗ ಸ್ವಾಗತಿಸಿದರೆ, ಹರಿಣಿ ವಂದಿಸಿದರು. ವಿದ್ಯಾರ್ಥಿನಿ ಐಶ್ವರ್ಯ ಕಾರ್ಯಕ್ರಮ ನಿರೂಪಿಸಿದರು.


Spread the love