ಹೆಚ್ಡಿಕೆಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು

Spread the love

ಹೆಚ್ಡಿಕೆಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು

ಮೈಸೂರು: ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರ ಸ್ವಾಮಿ ಮತ್ತು ಸಿದ್ದರಾಮಯ್ಯ ಅವರ ವಾಕ್ಸಮರ ಮುಂದುವರೆದ ಬೆನ್ನಲ್ಲೇ ತನ್ನ ತಂದೆಯ ಪರವಾಗಿ ಮಾತನಾಡಿರುವ ಯತೀಂದ್ರ ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷಕ್ಕೆ ಸಿದ್ದರಾಮಯ್ಯನವರು ಯಾವುದೇ ಮೋಸ ಮಾಡಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಈ ನಡುವೆ ಸಿದ್ದರಾಮಯ್ಯನವರ ವಿರುದ್ಧ ಮಾತನಾಡಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರ ಪಾಪದ ಕೊಡ ತುಂಬಿದೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ ಅವರು, ಪಾಪ ತುಂಬುವುದಕ್ಕೆ ಸಿದ್ದರಾಮಯ್ಯ ಅವರು ಯಾವುದೇ ರೀತಿಯ ಪಾಪ ಮಾಡಿಲ್ಲ. ಜೆಡಿಎಸ್ ಪಕ್ಷಕ್ಕೂ ಮೋಸ ಮಾಡಿಲ್ಲ ಎಂದು ಹೇಳಿದರು.

ವರುಣ ಕ್ಷೇತ್ರದ ಸೋಮೇಶ್ವರಪುರ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷದವರೇ ಪಕ್ಷದಲ್ಲಿ ಬೆಳೆಯುತ್ತಿರುವ ನಾಯಕರುಗಳನ್ನು ಮೊಟಕುಗೊಳಿಸಬೇಕು ಅಂತ ಹೇಳಿ ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. ಅದರಿಂದ ಸಿದ್ದರಾಮಯ್ಯನವರಿಗೆ ಒಳ್ಳೆಯದಾಗಿದೆ. ಈಗಲೂ ಕೂಡ ಕಾಂಗ್ರೆಸ್ ನಲ್ಲಿ ಒಳ್ಳೆಯದೇ ಆಗುತ್ತಿದ್ದು, ಮತ್ತೆ ಸಿದ್ದರಾಮಯ್ಯನವರ ನೇತೃತ್ವದಲ್ಲಿಯೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಜೆಡಿಎಸ್ ಪಕ್ಷ ತನ್ನ ನೆಲೆಯನ್ನು ಕಳೆದುಕೊಳ್ಳುವುದಂತು ಖಚಿತ ಎಂದು ಇದೇ ಸಂದರ್ಭ ತಿಳಿಸಿದರು.


Spread the love