ಹೆಣ್ಣು ಮಕ್ಕಳ ವೈಯಕ್ತಿಕ ಮಾಹಿತಿ ನೀಡದಂತೆ ಸೂಚನೆ

Spread the love

ಹೆಣ್ಣು ಮಕ್ಕಳ ವೈಯಕ್ತಿಕ ಮಾಹಿತಿ ನೀಡದಂತೆ ಸೂಚನೆ

 

ಮಂಗಳೂರು: ಬೇಟಿ ಬಚಾವೊ ಬೇಟಿ ಪಡಾವೊ ಕಾರ್ಯಕ್ರಮದ ಹೆಸರಿನಲ್ಲಿ ವಂಚನೆ ಮಾಡುವವರ ವಿರುದ್ಧ ಬೇಟಿ ಬಚಾವೊ, ಬೇಟಿ ಪಡಾವೊ ಕಾರ್ಯಕ್ರಮದಡಿಯಲ್ಲಿ ರೂ.2 ಲಕ್ಷ ನಗದು ಉತ್ತೇಜನ ನೀಡುವುದಾಗಿ ಕೆಲವು ಅನಧಿಕೃತ ಸಂಘಟನೆಗಳು/ಸ್ವಯಂ ಸೇವಾ ಸಂಸ್ಥೆಗಳು/ವ್ಯಕ್ತಿಗಳು ಹೆಣ್ಣು ಮಕ್ಕಳ ವೈಯಕ್ತಿಕ ಮಾಹಿತಿಯನ್ನು ನಮೂನೆಯಲ್ಲಿ ಪಡೆದು ವಂಚಿಸುತ್ತಿರುವುದು ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವಾಲಯದ ಗಮನಕ್ಕೆ ಬಂದಿರುತ್ತದೆ.

ಎಲ್ಲಾ ಸಾರ್ವಜನಿಕರ ಗಮನಕ್ಕೆ: ಬೇಟಿ ಬಚಾವೊ ಬೇಟಿ ಪಡಾವೊ ಯೋಜನೆಯಡಿಯಲ್ಲಿ ಯಾರಿಗೂ ನಗದು ವಿತರಣೆ ಮಾಡುವ ಕಾರ್ಯಕ್ರಮ ಇರುವುದಿಲ್ಲ. ಅನಧಿಕೃತ ಸಂಸ್ಥೆಗಳು/ವ್ಯಕ್ತಿಗಳು ಈ ಯೋಜನೆಯಡಿ ಹಣವನ್ನು ನೀಡುವುದಾಗಿ ಭರವಸೆ ನೀಡಿ ಸಾರ್ವಜನಿಕರನ್ನು ಮೋಸ ಮಾಡುತ್ತಿವೆ. ಈ ರೀತಿ ವಂಚನೆಯನ್ನು ಮಾಡುವ ಅಥವಾ ಪ್ರಚಾರ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಇಂತಹ ವಂಚನೆಗಳು ಬೆಳಕಿಗೆ ಬಂದಾಗಲೆಲ್ಲಾ ಎಫ್.ಐ.ಆರ್ ಗಳನ್ನು ಈಗಾಗಲೇ ನೋಂದಾಯಿಸಲಾಗಿದೆ.

ಇಂತಹ ವಂಚಕರ ಬಲೆಗೆ ಬೀಳದಂತೆ ಸಾರ್ವಜನಿಕರಿಗೆ ಸಲಹೆ/ಸೂಚನೆ ನೀಡಲಾಗಿದೆ. ಈ ಯೋಜನೆಯಡಿ ವಂಚಕರು ನಮೂನೆಯಲ್ಲಿ ಕೋರುವ ಯಾವುದೇ ವೈಯಕ್ತಿಕ ವಿವರಗಳನ್ನು ಅಂದರೆ ಆಧಾರ್ ಕಾರ್ಡ್, ಬ್ಯಾಂಕ್ ವಿವರಗಳು, ದೂರವಾಣಿ/ಮೊಬೈಲ್ ಸಂಖ್ಯೆ/ಇ-ಮೇಲ್ ಐಡಿ/ಇತರೆ ಯಾವುದೇ ಮಾಹಿತಿಗಳನ್ನು ಬಹಿರಂಗಪಡಿಸಬಾರದು. ಇಂತಹ ವಂಚನೆಗಳನ್ನು ಮಾಡುವವರ ಬಗ್ಗೆ ವ್ಯಕ್ತಿಗಳ/ಸಂಸ್ಥೆಗಳ ಹೆಸರನ್ನು ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸಿ.

ನಿಮ್ಮ ಸ್ನೇಹಿತರು, ಸಂಬಂಧಿಕರು ಹಾಗೂ ನಿಮ್ಮನ್ನು ಸಂಪರ್ಕಿಸುವ ಎಲ್ಲರಿಗೂ ಇಂತಹ ವಂಚಕರ ವಿರುದ್ಧ ಜಾಗರೂಕರಾಗಿರಲು ತಿಳಿಸಬೇಕು ಎಂದು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದ.ಕ ಮಂಗಳೂರು ಇವರ ಪ್ರಕಟನೆ ತಿಳಿಸಿದೆ.


Spread the love