ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Spread the love

ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಮಂಗಳೂರು : ಇಲ್ಲಿನ ಎಡಪದವು ಪೇಟೆಯಲ್ಲಿ ಶುಕ್ರವಾರ ಸಂಜೆ ಮಣ್ಣು ತುಂಬಿಕೊಂಡು ಹೋಗುತ್ತಿದ್ದ ಬೃಹತ್ ಲಾರಿಯೊಂದರ ಬ್ರೇಕ್ ಫೇಲ್ ಆದ ಕಾರಣ ರಸ್ತೆ ಬದಿಯಲ್ಲಿದ್ದ ಅಂಗಡಿಗಳಿಗೆ ಗುದ್ದಿ ಬಳಿಕ ಖಾಸಗಿ ಬಸ್, ಲಾರಿ ಮತ್ತು ಹಲವು ವಾಹನಗಳಿಗೆ ಗುದ್ದಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಭಾರೀ ಅವಘಡ ತಪ್ಪಿ ಹೋಗಿದೆ.


ಮಂಗಳೂರು- ಮೂಡಬಿದಿರೆ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಈ ಅವಘಡ ನಡೆದಿದ್ದು, ಬ್ರೇಕ್ ಫೇಲ್ ಆದ ಲಾರಿಯ ಚಾಲಕ ಮತ್ತು ಮತ್ತೊಂದು ಲಾರಿಯ ಚಾಲಕ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ.

ಲಾರಿ ಕಟ್ಟಡಕ್ಕೆ ಗುದ್ದಿದ ಪರಿಣಾಮ ಮೂರು ಅಂಗಡಿಗಳಿಗೆ ಭಾರಿ ಹಾನಿಯಾಗಿದೆ. ಲಾರಿ, ಖಾಸಗಿ ಬಸ್ ಜಖಂ ಗೊಂಡಿದ್ದು, ರಸ್ತೆಬದಿಯಲ್ಲಿ ನಿಲ್ಲಿಸಿದ್ದ ನಾಲ್ಕು ಸ್ಕೂಟರ್ ಗಳು ಜಖಂಗೊಂಡಿದೆ.

ಸ್ಥಳಕ್ಕೆ ಬಜ್ಪೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love