ಹೆದ್ದಾರಿ ದರೋಡೆ ಪ್ರಕರಣ – ಇನ್ನೋರ್ವ ಆರೋಪಿಯ ಬಂಧನ

Spread the love

ಹೆದ್ದಾರಿ ದರೋಡೆ ಪ್ರಕರಣ – ಇನ್ನೋರ್ವ ಆರೋಪಿಯ ಬಂಧನ

ಮಂಗಳೂರು : ನಗರದ ಮೂಡಬಿದ್ರೆ, ಮೂಲ್ಕಿ, ಬಜಪೆ ಪೊಲೀಸ್ ಠಾಣಾ ಸರಹದ್ದುಗಳಲ್ಲಿ ವಾಹನ ಸವಾರರನ್ನು ಅಡ್ಡಗಟ್ಟಿ ದ್ವಿಚಕ್ರ ವಾಹನಗಳು, ಹಣ ಮತ್ತಿತರ ವಸ್ತುಗಳನ್ನು ಸುಲಿಗೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಪುತ್ತೂರು ತಾಲೂಕು ಕೆದಂಬಾಡಿ ಗ್ರಾಮದ ಅಬ್ದುಲ್ ಬಷೀರ್ (40) ಎಂದು ಗುರುತಿಸಲಾಗಿದೆ.

ಮಂಗಳೂರು ನಗರದ ಮೂಡಬಿದ್ರೆ, ಮೂಲ್ಕಿ, ಬಜಪೆ ಪೊಲೀಸ್ ಠಾಣಾ ಸರಹದ್ದುಗಳಲ್ಲಿ ವಾಹನ ಸವಾರರನ್ನು ಅಡ್ಡಗಟ್ಟಿ ದ್ವಿಚಕ್ರ ವಾಹನಗಳು, ಹಣ ಮತ್ತಿತರ ವಸ್ತುಗಳನ್ನು ಸುಲಿಗೆ ಮಾಡಿದ್ದ ಆರೋಪಿಗಳನ್ನು ಪತ್ತೆ ಮಾಡಿ ತನಿಖೆ ಕೈಗೊಂಡಿದ್ದ ಮೂಡಬಿದ್ರೆ ಠಾಣಾ ಪೊಲೀಸರು ಮಂಗಳೂರು ನಗರದ 7 ಪ್ರಕರಣಗಳು, ದಕ್ಷಿಣ ಕನ್ನಡ ಜಿಲ್ಲೆಯ 8 ಪ್ರಕರಣಗಳು, ಹಾಸನ ಜಿಲ್ಲೆಯ 2 ಪ್ರಕರಣಗಳು, ಚಿಕ್ಕಮಗಳೂರು ಜಿಲ್ಲೆಯ 3 ಪ್ರಕರಣಗಳು, ಕೊಡಗು ಜಿಲ್ಲೆಯ 5 ಪ್ರಕರಣಗಳು, ಉಡುಪಿ ಜಿಲ್ಲೆಯ 2 ಪ್ರಕರಣಗಳು ಮತ್ತು ಬೆಂಗಳೂರು ನಗರದ 1 ಪ್ರಕರಣ, ಒಟ್ಟು 28 ಪ್ರಕರಣಗಳು ಪತ್ತೆಯಾಗಿದ್ದು, ಈ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳಲ್ಲಿ ಒಟ್ಟು 15 ಜನ ಆರೋಪಿಗಳನ್ನು ಈ ಹಿಂದೆ ದಸ್ತಗಿರಿ ಮಾಡಲಾಗಿರುತ್ತದೆ.

ಈ ಕೇಸಿನ ತನಿಖೆಯನ್ನು ಮುಂದುವರೆಸಿದ ಮೂಡಬಿದ್ರೆ ಠಾಣಾ ಪೊಲೀಸರು ಅಬ್ದುಲ್ ಬಷೀರ್ ನನ್ನು ಎಂಬಾತನನ್ನು ಬಂಧಿಸಿದ್ದು, ತನಿಖೆಯ ವೇಳೆ ಈತನು ದರೋಡೆ ಪ್ರಕರಣಗಳಲ್ಲಿ ಈಗಾಗಲೇ ದಸ್ತಗಿರಿಯಾಗಿರುವ ಆರೋಪಿಗಳಿಗೆ ಕೃತ್ಯ ನಡೆಸಲು ಬೇಕಾದ ಹಣಕಾಸಿನ ನೆರವನ್ನು ನೀಡುತ್ತಿದ್ದ ಬಗ್ಗೆ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣಾ ಮೊ.ಸಂ. 123/2020 ಕಲಂ, 450, 395, 397 ಐಪಿಸಿ ಪ್ರಕರಣದಲ್ಲಿ ಮನೆಯನ್ನು ದರೋಡೆ ಮಾಡಲು ಸಂಚು ರೂಪಿಸಿದ್ದ ಬಗ್ಗೆ ತಿಳಿದು ಬಂದಿರುತ್ತದೆ. ಈತನು ಈ ಹಿಂದೆ 2018 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸಿ ಸೋತಿದ್ದು, ಸಮಾಜ ಸೇವೆಯ ಮುಖವಾಡದಲ್ಲಿ ಹಲವಾರು ಅಕ್ರಮ ಚಟುವಟಿಕೆಗಳಿಗೆ ಸಹಕರಿಸುತ್ತಿದ್ದ ಬಗ್ಗೆ ಮಾಹಿತಿ ದೊರೆತಿರುತ್ತದೆ. ಈ ನಿಟ್ಟಿನಲ್ಲಿಯೂ ಸಹ ಹೆಚ್ಚಿನ ತನಿಖೆ ಕೈಗೊಳ್ಳಲಾಗಿರುತ್ತದೆ. ಪ್ರಸ್ತುತ ಈತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ.

ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ಐಪಿಎಸ್, ಉಪ ಪೊಲೀಸ್ ಆಯುಕ್ತರಾದ ಹರಿರಾಮ್ ಶಂಕರ್ ಐಪಿಎಸ್ (ಕಾ&ಸು), ಉಪ ಪೊಲೀಸ್ ಆಯುಕ್ತರಾದ ವಿನಯ ಎ.ಗಾವಂಕರ್ (ಅ&ಸಂ) ಮಂಗಳೂರು ನಗರ ರವರ ಮಾರ್ಗದರ್ಶನದಲ್ಲಿ ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಮಹೇಶ್ ಕುಮಾರ್ ನೇತೃತ್ವದಲ್ಲಿ ಮೂಡಬಿದಿರೆ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ದಿನೇಶ್ ಕುಮಾರ್ ಬಿ.ಎಸ್ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.


Spread the love

Leave a Reply

Please enter your comment!
Please enter your name here