ಹೆಮ್ಮನಹಳ್ಳಿಯಲ್ಲಿ ಶಾಲಾ ವಿದ್ಯಾರ್ಥಿ ಆತ್ಮಹತ್ಯೆ

Spread the love

ಹೆಮ್ಮನಹಳ್ಳಿಯಲ್ಲಿ ಶಾಲಾ ವಿದ್ಯಾರ್ಥಿ ಆತ್ಮಹತ್ಯೆ

ಕೆ.ಆರ್.ಪೇಟೆ: ತಂದೆ ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಶಾಲಾ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೆಮ್ಮನಹಳ್ಳಿಯಲ್ಲಿ ನಡೆದಿದೆ.

ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಒಂಭತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಹೆಚ್.ಕೆ.ಪ್ರಜ್ವಲ್(14) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಪಟ್ಟಣಕ್ಕೆ ಅನತಿ ದೂರದಲ್ಲಿರುವ ಹೆಮ್ಮನಹಳ್ಳಿ ಗ್ರಾಮದ ನಿವಾಸಿ ಕಾಂತರಾಜು ಭಾರತಿ ದಂಪತಿ ಪುತ್ರ ಪ್ರಜ್ವಲ್ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದನು. ಮನೆಯಲ್ಲಿ ಸಣ್ಣಪುಟ್ಟ ವಿಚಾರಕ್ಕೆ ತಂದೆ ಮಗನಿಗೆ ಬುದ್ದಿ ಹೇಳಿದ್ದಾರೆ. ಇದರಿಂದ ಕೋಪಗೊಂಡ ಪ್ರಜ್ವಲ್ ನೇಣಿಗೆ ಶರಣಾಗಿದ್ದಾನೆ.

ಮೃತ ಪ್ರಜ್ವಲ್ ನಿಧನಕ್ಕೆ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಡಿ.ಬಿ.ಸತ್ಯ, ಉಪಪ್ರಾಂಶುಪಾಲ ಹೆಚ್.ವಿ.ತಿಮ್ಮೇಗೌಡ, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.


Spread the love