
ಹೆಮ್ಮಾಡಿ: ಬೈಂದೂರು ವಲಯ ಮಟ್ಟದ ಕಬಡ್ಡಿ ಪಂದ್ಯಾಟ
ಕುಂದಾಪುರ: ಹೆಮ್ಮಾಡಿಯ ಜನತಾ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು, ಜನತಾ ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ಬೈಂದೂರು ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಶುಕ್ರವಾರ ನಡೆಯಿತು.
ಪಂದ್ಯಾಟವನ್ನು ಉದ್ಘಾಟಿಸಿದ ಬೈಂದೂರು ಮಾಜಿ ಶಾಸಕ, ಶ್ರೀ ವಿ.ವಿ.ವಿ. ಮಂಡಳಿಯ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಮಾತನಾಡಿ, ಜನತಾ ಸಂಸ್ಥೆಗಳು ಶೈಕ್ಷಣಿಕವಾಗಿ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇಲ್ಲಿನ ವಿದ್ಯಾರ್ಥಿಗಳ ಶಿಸ್ತು, ಬದ್ಧತೆ ಎಲ್ಲರಿಗೂ ಮಾದರಿ ಎಂದು ಕ್ರೀಡಾಳುಗಳಿಗೆ ಶುಭಹಾರೈಸಿದರು.
ಜನತಾ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಂದಿ ದೇವಾಡಿಗ, ಕಟ್ಬೆಲ್ತೂರು ಗ್ರಾ.ಪಂ. ಅಧ್ಯಕ್ಷೆ ವೈಶಾಲಿ, ಉಪಾಧ್ಯಕ್ಷ ರಾಮ ಶೆಟ್ಟಿ, ಬೈಂದೂರು ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಗುರುರಾಜ ಎಸ್., ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ರವಿಶಂಕರ್ ಹೆಗ್ಡೆ, ಗ್ರೇಡ್ 1 ದೈ. ಶಿ. ಶಿ. ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಸತ್ಯನಾರಾಯಣ ಜಿ., ಪ್ರಭಾಕರ, ಸುರೇಂದ್ರ ಶೆಟ್ಟಿ, ಮಂಜುನಾಥ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಜನತಾ ಸ್ವತಂತ್ರ ಪ.ಪೂ. ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರ ಹಾಗೂ ಜನತಾ ಪ್ರೌಢಶಾಲೆ ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ರಾಘವೇಂದ್ರ ಕುಲಾಲ್, ಹಿರಿಯ ಕಬಡ್ಡಿ ಕೋಚ್ ಪ್ರಸಾದ್ ಆಚಾರ್, ಚಂದ್ರ ಪಿ. ಅವರನ್ನು ಸನ್ಮಾನಿಸಲಾಯಿತು. ರಾಜ್ಯ ಮಟ್ಟದಲ್ಲಿ ಬೈಂದೂರನ್ನು ಪ್ರತಿನಿಧಿಸಿದ ರತನ್, ರಿತೇಶ್, ರೋಹಿತ್ ಅವರನ್ನು ಅಭಿನಂದಿಸಲಾಯಿತು.
ಬೈಂದೂರು ವಲಯದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಪ್ರಸ್ತಾವಿಸಿ, ಜನತಾ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಮಂಜು ಕಾಳಾವರ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ದೇವೇಂದ್ರ ನಾಯ್ಕ ವಂದಿಸಿದರು. ಶಿಕ್ಷಕ ಜಗದೀಶ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ಮಹೇಂದ್ರ ದೇವಾಡಿಗ, ಶ್ರೀಧರ ಗಾಣಿಗ ಸಹಕರಿಸಿದರು.