
Spread the love
ಹೈಡ್ರಾಮಕ್ಕೆ ಕೊನೆಗೂ ತೆರೆ! ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಪಟ್ಟ, ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿ
ನವದೆಹಲಿ: ಸಿದ್ದರಾಮಯ್ಯಗೆ 2ನೇ ಬಾರಿಗೆ ಮುಖ್ಯಮಂತ್ರಿ ಪಟ್ಟ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಒಲಿದುಬಂದಿದೆ.
ಬುಧವಾರ ನಡುರಾತ್ರಿ ನಡೆದ ಅಂತಿಮ ಬೆಳವಣಿಗೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಸರ್ವಾನುಮತದ ನಿರ್ಣಯವನ್ನು ಇದೀಗತಾನೆ ದೆಹಲಿಯಲ್ಲಿ ಪ್ರಕಟಿಸಿದ್ದಾರೆ. ಮೇ 20 ಶನಿವಾರ ಮಧ್ಯಾಹ್ನ 12.30ಕ್ಕೆ ಪದಗ್ರಹಣ ನಡೆಯಲಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಕಳೆದ 5 ದಿನಗಳಿಂದ ನಡೆಯುತ್ತಿದ್ದ ಸಿಎಂ ಆಯ್ಕೆ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಗುರುವಾರ ಸಂಜೆ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶಾಸಕಾಂಗ ಸಭೆ ಕರೆದಿದ್ದಾರೆ. ವಿಧಾನಸಭೆ, ಪರಿಷತ್, ಕಾಂಗ್ರೆಸ್ ಸಂಸದರನ್ನು ಬೆಂಗಳೂರು ಕ್ವೀನ್ಸ್ ರಸ್ತೆಯ ಇಂದಿರಾ ಗಾಂಧಿ ಭವನದಲ್ಲಿ ನಡೆಯುವ ಸಭೆಗೆ ಡಿಕೆಶಿ ಆಹ್ವಾನಿಸಿದ್ದಾರೆ.
Spread the love