ಮಂಗಳ ಕ್ರೀಡಾಂಗಣ ಅಭಿವೃದ್ಧಿಗೆ ₹20 ಕೋಟಿ ಅನುದಾನ: ವಿಸ್ತೃತ ಯೋಜನೆ ರೂಪಿಸಲು ಸಭೆ

Spread the love

ಮಂಗಳ ಕ್ರೀಡಾಂಗಣ ಅಭಿವೃದ್ಧಿಗೆ ₹20 ಕೋಟಿ ಅನುದಾನ: ವಿಸ್ತೃತ ಯೋಜನೆ ರೂಪಿಸಲು ಸಭೆ

ಮಂಗಳೂರು: ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಂಗಳ ಕ್ರೀಡಾಂಗಣದ ಅಭಿವೃದ್ಧಿಗೆ ₹20 ಕೋಟಿ ಅನುದಾನ ಮಂಜೂರು ಮಾಡಲಾಗಿದ್ದು, ಯೋಜನೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ವಿಸ್ತೃತ ಯೋಜನೆ ರೂಪಿಸಲು ಸಭೆ ನಡೆಸಲಾಯಿತು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಂಗಳ ಕ್ರೀಡಾಂಗಣದ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕಾಮಗಾರಿಗಳು ಹಾಗೂ ಯೋಜನೆಯ ಅನುಷ್ಠಾನದ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜಾ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರೀತಮ್, ಕಿರಿಯ ಅಭಿಯಂತರ ಹೇಮಂತ್, ವಾಸ್ತುಶಿಲ್ಪಿ ವೆಂಕಟೇಶ್ ಪೈ, ಮಂಗಳ ಅಥ್ಲೆಟಿಕ್ ಕ್ಲಬ್‌ನ ದಿನೇಶ್ ಕುಂದರ್, ಲಾರೆನ್ಸ್ ಡಿಸೋಜಾ ಸೇರಿದಂತೆ ಇತರರು ಉಪಸ್ಥಿತರಿದ್ದರು.


Spread the love
Subscribe
Notify of

0 Comments