Home Mangalorean News Kannada News ಅಂಬೇಡ್ಕರ್ ಭವನ ನಿರ್ಮಾಣಕ್ಕೆ ₹5 ಕೋಟಿ ಅನುದಾನಕ್ಕೆ ಮನವಿ: ಸಚಿವ ಕೆ.ಎಚ್. ಮುನಿಯಪ್ಪರಿಂದ ಭರವಸೆ

ಅಂಬೇಡ್ಕರ್ ಭವನ ನಿರ್ಮಾಣಕ್ಕೆ ₹5 ಕೋಟಿ ಅನುದಾನಕ್ಕೆ ಮನವಿ: ಸಚಿವ ಕೆ.ಎಚ್. ಮುನಿಯಪ್ಪರಿಂದ ಭರವಸೆ

Spread the love

ಅಂಬೇಡ್ಕರ್ ಭವನ ನಿರ್ಮಾಣಕ್ಕೆ ₹5 ಕೋಟಿ ಅನುದಾನಕ್ಕೆ ಮನವಿ: ಸಚಿವ ಕೆ.ಎಚ್. ಮುನಿಯಪ್ಪರಿಂದ ಭರವಸೆ

ಮಂಗಳೂರು: ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಸುರತ್ಕಲ್ ಹೋಬಳಿಯ ಕುಂಜತ್‌ಬೈಲ್ ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ₹5 ಕೋಟಿ ಅನುದಾನ ನೀಡುವಂತೆ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರ ನೇತೃತ್ವದ ನಿಯೋಗವು ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಸಂಘದ ಅಧ್ಯಕ್ಷ ರಘುನಾಥ್ ಅತ್ತಾವರ, ಸಂಜೀವ ಕೋಟ್ಯಾನ್, ಆನಂದ್ ಅತ್ತಾವರ, ಈಶ್ವರ್, ಅವಿನಾಶ್ ಕುಂಜತ್‌ಬೈಲ್ ಹಾಗೂ ಪ್ರಶಾಂತ್ ಸೇರಿದಂತೆ ನಿಯೋಗದ ಸದಸ್ಯರು ಸಚಿವರನ್ನು ಭೇಟಿ ಮಾಡಿ, ಸುಮಾರು ₹5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಬೇಡ್ಕರ್ ಭವನಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಅಂಬೇಡ್ಕರ್ ಭವನದಲ್ಲಿ ಭವ್ಯ ಸಭಾಂಗಣ, ಮಿನಿ ಹಾಲ್, ಸಹಕಾರಿ ಸಂಘದ ಕೌಶಲ್ಯಾಭಿವೃದ್ಧಿ ಮತ್ತು ತರಬೇತಿ ಕೇಂದ್ರ, ಮಹಿಳಾ ಘಟಕದ ಕಚೇರಿ, ಕುಲದೈವ ಅಧ್ಯಯನ ಕೇಂದ್ರ ಹಾಗೂ ವಿವಿಧ ತರಬೇತಿ ಕಾರ್ಯಕ್ರಮಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಅವಕಾಶವಿದ್ದು, ಇದು ಸಮುದಾಯದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಐವನ್ ಡಿ’ಸೋಜಾ ಅವರು ಸಚಿವರ ಗಮನಕ್ಕೆ ತಂದರು.

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಕೆ.ಎಚ್. ಮುನಿಯಪ್ಪ ಅವರು, ಮುಂದಿನ 15 ದಿನಗಳೊಳಗೆ ಈ ಕುರಿತು ತೀರ್ಮಾನ ಕೈಗೊಂಡು ಅಗತ್ಯ ಅನುದಾನ ಬಿಡುಗಡೆ ಮಾಡುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು.

ಸಮುದಾಯದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಲಿರುವ ಈ ಮಹತ್ವದ ಯೋಜನೆಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಸಂತಸ ತಂದಿದೆ ಎಂದು ಐವನ್ ಡಿ’ಸೋಜಾ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ನಿಯೋಗದ ಸದಸ್ಯರು ಸಚಿವರಿಗೆ ಧನ್ಯವಾದ ಸಲ್ಲಿಸಿದರು.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version