ಅಂಬ್ಯುಲೆನ್ಸಿಗೆ ದಾರಿ ಬಿಡದೆ ಅಡಚಣೆ: ಬಂಟ್ವಾಳದಲ್ಲಿ ಬೈಕ್ ಸವಾರನ ವಿರುದ್ಧ ಪ್ರಕರಣ

Spread the love

ಅಂಬ್ಯುಲೆನ್ಸಿಗೆ ದಾರಿ ಬಿಡದೆ ಅಡಚಣೆ: ಬಂಟ್ವಾಳದಲ್ಲಿ ಬೈಕ್ ಸವಾರನ ವಿರುದ್ಧ ಪ್ರಕರಣ

ಬಂಟ್ವಾಳ: ಅಪಘಾತದ ಗಾಯಾಳುಗಳನ್ನು ಮಂಗಳೂರಿಗೆ ಕರೆದೊಯ್ಯುತ್ತಿದ್ದ ಅಂಬ್ಯುಲೆನ್ಸ್ಗೆ ದಾರಿ ಬಿಡದೆ ಸಂಚಾರಕ್ಕೆ ಅಡಚಣೆ ಉಂಟುಮಾಡಿದ ಘಟನೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್.ಜಿ. ಸರ್ಕಲ್ ಬಳಿ ನಡೆದಿದೆ.

ಮಾಹಿತಿಯ ಪ್ರಕಾರ, ಅಕ್ಟೋಬರ್ 30, 2025 ರಂದು ಬಿಸಿಲೆ ಘಾಟ್ನಲ್ಲಿ ಸಂಭವಿಸಿದ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು, ತುರ್ತು ಚಿಕಿತ್ಸೆಯ ನಂತರ ಗಂಭೀರ ಸ್ಥಿತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕಳುಹಿಸಲಾಗುತ್ತಿತ್ತು. KA-22-C-1382 ನಂಬರಿನ ಅಂಬ್ಯುಲೆನ್ಸ್ ಪುತ್ತೂರಿನಿಂದ ಮಂಗಳೂರಿನತ್ತ ಸಾಗುತ್ತಿದ್ದಾಗ ಮಧ್ಯಾಹ್ನ ಸುಮಾರು 1.30 ಗಂಟೆಗೆ ಬಿ.ಸಿ.ರೋಡ್ ಎನ್.ಜಿ. ಸರ್ಕಲ್ ಬಳಿ KA-19-EK-0696 ನಂಬರಿನ ಬೈಕ್ ಸವಾರ ಅಂಬ್ಯುಲೆನ್ಸ್ನ ಸೈರನ್ ಶಬ್ದ ಕೇಳಿಯೂ ದಾರಿ ಬಿಡದೆ ಅಡಚಣೆ ಉಂಟುಮಾಡಿದ್ದಾನೆ.

ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಮಾಡಿದ ವ್ಯಕ್ತಿಯನ್ನು ಮಹಮ್ಮದ್ ಮನ್ಸೂರು (38), ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.

ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 128/2025ರ ಪ್ರಕಾರ ಕಲಂ 110, 125 ಬಿ.ಎನ್.ಎಸ್ ಅಡಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿ ವಶಕ್ಕೆ ಪಡೆಯಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love