ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ
ಉಡುಪಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಡಿಸಿಐಬಿ ಪೋಲಿಸರು ಶನಿವಾರ ಬಂಧಿಸಿದ್ದಾರೆ
ಬಂಧಿತನನ್ನು ಬಂಟ್ವಾಳ ನರಿಂಗಾನ ನಿವಾಸಿ ಇರ್ಫಾನ್ (29) ಎಂದು ಗುರುತಿಸಲಾಗಿದೆ.
ಫೆಬ್ರವರಿ 3 ರಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಲಕ್ಷ್ಮಣ ಬ ನಿಂಬರ್ಗಿ ಐ.ಪಿ.ಎಸ್ ರವರ ನಿರ್ದೇಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಕುಮಾರ ಚಂದ್ರ ಕೆ.ಎಸ್.ಪಿ.ಎಸ್ ಮತ್ತು ಕಾರ್ಕಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಹೃಷಿಕೇಶ್ ಸೋನವಾಲೆ ರವರ ಮಾರ್ಗದರ್ಶನದಲ್ಲಿ, ಉಡುಪಿ ಡಿ.ಸಿ.ಐ.ಬಿ ಇನ್ಸ್ಪೆಕ್ಟರ್ ಸಂಪತ್ ಕುಮಾರ್ ಎ ರವರು ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಯವರೊಂದಿಗೆ ಹೆಜಮಾಡಿ ರಾಜೀವ ಗಾಂಧಿ ಕ್ರೀಡಾಂಗಣದ ಬಳಿ ದಾಳಿ ನಡೆಸಿ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಹೊಂದಿದ್ದ ಆರೋಪಿ ಇರ್ಫಾನ್ ಟಿ.ಎಂ ಎಂಬವರನ್ನು ದಸ್ತಗಿರಿ ಮಾಡಿ ಒಟ್ಟು 1,170 ಗ್ರಾಂ ತೂಕದ ಗಾಂಜಾ ಅಂದಾಜು ಮೌಲ್ಯ 25,000/- ರೂಪಾಯಿ, ನಂಬ್ರ ಪ್ಲೇಟ್ ಇಲ್ಲದ ಸುಜುಕಿ ಎಸೆಸ್ 125 ಸ್ಕೂಟರ್, ಮೊಬೈಲ್ ಫೋನ್ -1 ಗಳನ್ನು ಸ್ವಾಧೀನಪಡಿಸಿಕೊಂಡು ಪಡುಬಿದ್ರೆ ಠಾಣೆಗೆ ಹಸ್ತಾಂತರಿಸಿದ್ದು ಪಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಕಾರ್ಯಾಚರಣೆಯಲ್ಲಿ ಡಿ.ಸಿ.ಐ.ಬಿ ಘಟಕದ ಎಎಸ್ಐ ರವಿಚಂದ್ರ ಹಾಗೂ ಸಿಬ್ಬಂದಿಯವರಾದ ಸುರೇಶ, ಸಂತೋಷ ಕುಂದರ್, ಚಂದ್ರ ಶೆಟ್ಟಿ, ರಾಮು ಹೆಗ್ಡೆ, ರಾಘವೇಂದ್ರ ಉಪ್ಪುಂದ, ಪ್ರವೀಣ, ರಾಜ್ ಕುಮಾರ್, ದಯಾನಂದ ಪ್ರಭು, ಶಿವಾನಂದ ಹಾಗೂ ಚಾಲಕ ರಾಘವೇಂದ್ರ ರವರು ಸಹಕರಿಸಿರುತ್ತಾರೆ.
