ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ಮತ್ತು ಆರೋಪಿ ಬಂಧನ

Spread the love

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ಮತ್ತು ಆರೋಪಿ ಬಂಧನ

ಮಂಗಳೂರು: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಅದರ ಚಾಲಕನನ್ನು ಕದ್ರಿ ಪೂರ್ವ ಪೊಲೀಸರು ಬಂಧಿಸಿ ಆತನಿಂದ ಒಟ್ಟು 10ಟನ್ ಮರಳು ಹಾಗೂ ರೂ. 5.07 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿರುತ್ತಾರೆ.

ಬಂಧಿತನನ್ನು ಕಣ್ಣೂರು ನಿವಾಸಿ ಮಹಮ್ಮದ್ ನವಾಜ್ (38) ಎಂದು ಗುರುತಿಸಲಾಗಿದೆ.

ಆರೋಪಿಯು ಮಂಗಳೂರು ನಗರದ ಅಡ್ಯಾರ್ ನಿಂದ ಉಡುಪಿ ಕಡೆಗೆ ಲಾರಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದು ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದು ಮರಳನ್ನು ಮತ್ತು ಲಾರಿ ಚಾಲಕನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


Spread the love