ಅಕ್ರಮ ಗೋಸಾಗಾಟ ಪ್ರಕರಣ : ಜಾನುವಾರು ನೀಡಿದ ವ್ಯಕ್ತಿಯ ಮನೆ, ಕೊಟ್ಟಿಗೆ ಜಪ್ತಿ

Spread the love

ಅಕ್ರಮ ಗೋಸಾಗಾಟ ಪ್ರಕರಣ : ಜಾನುವಾರು ನೀಡಿದ ವ್ಯಕ್ತಿಯ ಮನೆ, ಕೊಟ್ಟಿಗೆ ಜಪ್ತಿ

ಮಂಗಳೂರು: ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡಿರುವ ಪ್ರಕರಣದಲ್ಲಿ ಜಾನುವಾರು ನೀಡಿದ ವ್ಯಕ್ತಿಯ ಮನೆ ಮತ್ತು ಕೊಟ್ಟಿಗೆಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಆರೋಪಿ ಭೋಜ ಮೂಲ್ಯ ಎಂಬವರ ಮನೆ ಹಾಗೂ ಅದಕ್ಕೆ ಹೊಂದಿಕೊಂಡಿರುವ ಜಾನುವಾರು ಕೊಟ್ಟಿಗೆ ಸೇರಿದಂತೆ ಆವರಣವನ್ನು ಕಾನೂನು ಪ್ರಕ್ರಿಯೆಯಂತೆ ಜಪ್ತಿ ಮಾಡಲಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸರು ಡಿ.13ರಂದು ಗೂಡ್ಸ್ ಅಟೋವನ್ನು ತಡೆದು ಪರಿಶೀಲಿಸಿದಾಗ, ಅದರಲ್ಲಿ ಒಂದು ಜಾನುವಾರನ್ನು ಹಗ್ಗದಿಂದ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಕಂಡು ಬಂದಿತ್ತು.

ಈ ಸಂಬಂಧ ವಾಹನದ ಚಾಲಕನಲ್ಲಿ ಈ ಬಗ್ಗೆ ವಿಚಾರಿಸಿದಾಗ, ಅತನು ಬಂಟ್ವಾಳ ಮಣಿನಾಲ್ಕೂರು ಗ್ರಾಮದ ನಿವಾಸಿ ಶ್ರೀಧರ ಪೂಜಾರಿ (56) ಎಂಬುದಾಗಿ ತಿಳಿಸಿದ್ದು, ಆತನು ಬಂಟ್ವಾಳ ಸರಪ್ಪಾಡಿ ಎಂಬಲ್ಲಿನ ಭೋಜ ಮೂಲ್ಯ ಎಂಬವರ ಮನೆಯಿಂದ ಯಾವುದೇ ದಾಖಲಾತಿ ಪರವಾನಿಗೆ ಇಲ್ಲದೇ ಎಲ್ಲಿಯೋ ಗೋಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಜಾನುವಾರನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡಿರುವುದು ಕಂಡುಬಂದಿತ್ತು ಎಂದು ಆರೋಪಿಸಲಾಗಿದೆ.

ಜಾನುವಾರು, ಅಟೋ ಹಾಗೂ ಒಂದು ಮೊಬೈಲ್ ಫೋನ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅರೋಪಿಗಳ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Subscribe
Notify of

0 Comments
Inline Feedbacks
View all comments