ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ಬಂಧನ, ಕರು ಹಾಗೂ ಕಾರು ವಶ

Spread the love

ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ಬಂಧನ, ಕರು ಹಾಗೂ ಕಾರು ವಶ

ಮಂಗಳೂರು: ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು, ಒಂದು ಗಂಡು ಕರು ಹಾಗೂ ಮಾರುತಿ ಬ್ರೀಜಾ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಮೇ 14, 2026ರಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಪಿಎಸ್‌ಐ ಕೃಷ್ಣಪ್ಪ ಹಾಗೂ ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ, ಬೆಳುವಾಯಿ ಕಡೆಯಿಂದ ಮಾರ್ನಾಡು ಅಳಿಯೂರು ಕಡೆಗೆ ಮಾರುತಿ ಬ್ರೀಜಾ ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭಿಸಿತ್ತು.

ಮಾಹಿತಿಯ ಮೇರೆಗೆ ಪೊಲೀಸರು ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ, ಕೆಎ19 ಎಂಕೆ 4265 ಸಂಖ್ಯೆಯ ಬೂದು ಬಣ್ಣದ ಮಾರುತಿ ಬ್ರೀಜಾ ಕಾರು ಬಂದಿದ್ದು, ನಿಲ್ಲಿಸಲು ಸೂಚಿಸಿದರೂ ವಾಹನ ನಿಲ್ಲಿಸದೆ ಮುಂದಕ್ಕೆ ಚಲಾಯಿಸಲಾಗಿದೆ.

ಪೊಲೀಸರು ವಾಹನವನ್ನು ಬೆನ್ನಟ್ಟಿದಾಗ, ಆರೋಪಿಗಳು ಗುಂಡುಕಲ್ಲು 5 ಸೆಂಟ್ಸ್ ರಸ್ತೆಗೆ ತಿರುಗಿ ಸಾಹುಲ್ ಹಮೀದ್ ಎಂಬುವರ ಮನೆಯ ಕಾಂಪೌಂಡ್ ಒಳಗೆ ಕಾರನ್ನು ನಿಲ್ಲಿಸಿ ಓಡಲು ಯತ್ನಿಸಿದ್ದಾರೆ. ಈ ವೇಳೆ ಹಂಡೇಲು ನಿವಾಸಿ ಹಾಗೂ ಮೂಡಬಿದ್ರೆ ಠಾಣೆಯ ಎಂಒಬಿ ಆಗಿರುವ ಮಹಮ್ಮದ್ ಆರಿಫ್ ಮತ್ತು ಗಂಟಾಲಕಟ್ಟೆಯ ಇಮ್ರಾನ್ @ ಇಬ್ರಾಹಿಂ ಅವರನ್ನು ಪೊಲೀಸರು ಬೆನ್ನಟ್ಟಿ ಬಂಧಿಸಿದ್ದಾರೆ.

ಪರಿಶೀಲನೆ ವೇಳೆ ಕಾರಿನ ಹಿಂಬದಿ ಸೀಟ್ ತೆಗೆದು ಅದರ ಮೇಲೆ ನೀಲಿ ಬಣ್ಣದ ಪ್ಲಾಸ್ಟಿಕ್ ಹಾಸಿ, ಒಂದು ಗಂಡು ಕರುವನ್ನು ಹಗ್ಗದಿಂದ ಕಾಲು ಹಾಗೂ ತಲೆಯನ್ನು ಕಟ್ಟಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿಗಳು ಕಳೆದ ಒಂದು ವಾರದಿಂದ ವಿವಿಧ ಕಡೆಗಳಿಂದ ಜಾನುವಾರುಗಳನ್ನು ಕಳ್ಳತನ ಮಾಡಿ, ಪಡುಮಾರ್ನಾಡು ಗ್ರಾಮದ ಗುಂಡುಕಲ್ಲಿನ ನಿವಾಸಿ ಸಾಹುಲ್ ಹಮೀದ್ ಅವರ ಮನೆಯ ಬಳಿ ಸಂಗ್ರಹಿಸಿ ಮಾಂಸ ಮಾರಾಟ ಅಥವಾ ಇತರರಿಗೆ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ತಿಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಜಾನುವಾರು, ಕೆಎ19 ಎಂಕೆ 4265 ಸಂಖ್ಯೆಯ ಮಾರುತಿ ಬ್ರೀಜಾ ಕಾರು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಮಹಮ್ಮದ್ ಆರಿಫ್ ವಿರುದ್ಧ ದಾಖಲಾಗಿರುವ ಪ್ರಕರಣಗಳು:
ಬಜ್ಪೆ ಪೊಲೀಸ್ ಠಾಣೆ ಅ.ಕ್ರ. 150/2024 – ಬಿಎನ್‌ಎಸ್ 303(2), ಗೋಹತ್ಯೆ ನಿಷೇಧ ಕಾಯ್ದೆ 2020ರ ಕಲಂ 4, 5, 7, 12.
ಬಣಕಲ್ ಪೊಲೀಸ್ ಠಾಣೆ ಅ.ಕ್ರ. 31/2024 – ಐಪಿಸಿ 379, ಗೋಹತ್ಯೆ ನಿಷೇಧ ಕಾಯ್ದೆ, ಪ್ರಾಣಿ ಹಿಂಸೆ ತಡೆ ಕಾಯ್ದೆ ಹಾಗೂ ಐಎಂವಿ ಕಾಯ್ದೆ.
ಮೂಡಬಿದ್ರೆ ಪೊಲೀಸ್ ಠಾಣೆ ಅ.ಕ್ರ. 56/2025 – ಬಿಎನ್‌ಎಸ್ 303(2) ಹಾಗೂ ಗೋಹತ್ಯೆ ನಿಷೇಧ ಕಾಯ್ದೆ.
ಮೂಡಬಿದ್ರೆ ಪೊಲೀಸ್ ಠಾಣೆ ಅ.ಕ್ರ. 130/2025 – ಬಿಎನ್‌ಎಸ್ 303(2).
ಇಮ್ರಾನ್ ವಿರುದ್ಧ ದಾಖಲಾಗಿರುವ ಪ್ರಕರಣಗಳು:
ಮೂಡಬಿದ್ರೆ ಪೊಲೀಸ್ ಠಾಣೆ ಅ.ಕ್ರ. 133/2024 – ಎನ್‌ಡಿಪಿಎಸ್ ಕಾಯ್ದೆ ಕಲಂ 27(b).
ಮೂಡಬಿದ್ರೆ ಪೊಲೀಸ್ ಠಾಣೆ ಅ.ಕ್ರ. 6/2025 – ಕೆಪಿ ಕಾಯ್ದೆ ಕಲಂ 87.
ಮೂಡಬಿದ್ರೆ ಪೊಲೀಸ್ ಠಾಣೆ ಅ.ಕ್ರ. 40/2025 – ಕೆಪಿ ಕಾಯ್ದೆ ಕಲಂ 87.
ಮೂಡಬಿದ್ರೆ ಪೊಲೀಸ್ ಠಾಣೆ ಅ.ಕ್ರ. 56/2025 – ಬಿಎನ್‌ಎಸ್ 303(2) ಹಾಗೂ ಗೋಹತ್ಯೆ ನಿಷೇಧ ಕಾಯ್ದೆ.
ಮೂಡಬಿದ್ರೆ ಪೊಲೀಸ್ ಠಾಣೆ ಅ.ಕ್ರ. 130/2025 – ಬಿಎನ್‌ಎಸ್ 303(2).


Spread the love
Subscribe
Notify of

0 Comments
Inline Feedbacks
View all comments