Home Mangalorean News Kannada News ಅಕ್ರಮ ಸಾಗಾಟ ಆರೋಪ: 24 ಜಾನುವಾರುಗಳ ರಕ್ಷಣೆ; ಪ್ರಕರಣ ದಾಖಲು

ಅಕ್ರಮ ಸಾಗಾಟ ಆರೋಪ: 24 ಜಾನುವಾರುಗಳ ರಕ್ಷಣೆ; ಪ್ರಕರಣ ದಾಖಲು

Spread the love

ಅಕ್ರಮ ಸಾಗಾಟ ಆರೋಪ: 24 ಜಾನುವಾರುಗಳ ರಕ್ಷಣೆ; ಪ್ರಕರಣ ದಾಖಲು

ಮಂಗಳೂರು: ಕೇರಳದಿಂದ ಕರ್ನಾಟಕದ ಕಡೆಗೆ ಕಂಟೇನರ್ ವಾಹನದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಜಾನುವಾರುಗಳನ್ನು ಪತ್ತೆ ಹಚ್ಚಲಾಗಿದೆ. ಕಂಟೇನ್‌ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 24 ಜಾನುವಾರುಗಳನ್ನು ರಕ್ಷಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸರು ತಿಳಿಸಿದ್ದಾರೆ.

ಕೇರಳದಿಂದ ಕರ್ನಾಟಕಕ್ಕೆ ಕಂಟೇನರ್ ವಾಹನದಲ್ಲಿ ಅಕ್ರಮವಾಗಿ ಜನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ರಸ್ತೆಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆದು ಜೂ. 1ರಂದು ಬೆಳಗ್ಗಿನ ಜಾವ ತಲಪಾಡಿ ಟೋಲ್ ಗೇಟ್ ಬಳಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 24 ಜಾನುವಾರುಗಳನ್ನು ರಕ್ಷಿಸಲಾಗಿದೆ. ಸಾಗಾಟಕ್ಕೆ ಉಪಯೋಗಿಸಿದ ಕಂಟೇನರ್ ವಾಹನವನ್ನು ಸ್ವಾಧೀನ ಪಡಿಸಿಕೊಂಡು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ರಕ್ಷಿಸಲ್ಪಟ್ಟ ಜಾನುವಾರುಗಳನ್ನು ಗೋಶಾಲೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

Exit mobile version