ಅಗಸ್ಟ್ 1 : ಉಡುಪಿ ಜಿಲ್ಲೆಯಲ್ಲಿ ಮತ್ತೆ 136 ಮಂದಿಗೆ ಕೊರೋನಾ ಪಾಸಿಟಿವ್ ದೃಢ

Spread the love

ಅಗಸ್ಟ್ 1 : ಉಡುಪಿ ಜಿಲ್ಲೆಯಲ್ಲಿ ಮತ್ತೆ 136 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶನಿವಾರ ಒಟ್ಟು 136 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4492 ಕ್ಕೆ ಏರಿಕೆಯಾಗಿದೆ.

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 736 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಶನಿವಾರ 716 ವರದಿಗಳು ನೆಗೆಟಿವ್ ಬಂದಿದ್ದು, 136 ಪಾಸಿಟಿವ್ ಬಂದಿವೆ. 446 ವರದಿಗಳು ಬರುವುದು ಬಾಕಿ ಇದೆ.

ಶನಿವಾರ ಸೋಂಕಿನ ಲಕ್ಷಣಗಳು ಕಂಡುಬಂದ 30 ಮಂದಿಗೆ ಐಸೊಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೂ 2646 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1811 ಸಕ್ರಿಯ ಪ್ರಕರಣಗಳು ಬಾಕಿ ಇವೆ.


Spread the love