ಅಗಸ್ಟ್ 12 : ಉಡುಪಿ ಜಿಲ್ಲೆಯಲ್ಲಿ ; 263 ಮಂದಿಗೆ ಕೊರೋನಾ ಪಾಸಿಟಿವ್, 1179 ನೆಗೆಟಿವ್

Spread the love

ಅಗಸ್ಟ್ 12 : ಉಡುಪಿ ಜಿಲ್ಲೆಯಲ್ಲಿ ; 263 ಮಂದಿಗೆ ಕೊರೋನಾ ಪಾಸಿಟಿವ್, 1179 ನೆಗೆಟಿವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬುಧವಾರ ಒಟ್ಟು 263 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 6766 ಕ್ಕೆ ಏರಿಕೆಯಾಗಿದೆ.

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 1577 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಬುಧವಾರ 1179 ವರದಿಗಳು ನೆಗೆಟಿವ್ ಬಂದಿದ್ದು, 263 ಪಾಸಿಟಿವ್ ಬಂದಿವೆ. 1745ವರದಿಗಳು ಬರುವುದು ಬಾಕಿ ಇದೆ.

ಜಿಲ್ಲೆಯಲ್ಲಿ ಇದುವರೆಗೂ 3966 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2738 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಜಿಲ್ಲೆಯಲ್ಲಿ ಇದುವರೆಗೆ ಕೊರೋನಾದಿಂದ ಒಟ್ಟು 69 ಮಂದಿ ಸಾವನಪ್ಪಿದ್ದಾರೆ


Spread the love