ಅಗಸ್ಟ್ 2 : ಉಡುಪಿ ಜಿಲ್ಲೆಯಲ್ಲಿ ಮತ್ತೆ 182 ಮಂದಿಗೆ ಕೊರೋನಾ ಪಾಸಿಟಿವ್ ದೃಢ

Spread the love

ಅಗಸ್ಟ್ 2 : ಉಡುಪಿ ಜಿಲ್ಲೆಯಲ್ಲಿ ಮತ್ತೆ 182 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾನುವಾರ ಒಟ್ಟು 182 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4674 ಕ್ಕೆ ಏರಿಕೆಯಾಗಿದೆ.

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 977 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಭಾನುವಾರ 625 ವರದಿಗಳು ನೆಗೆಟಿವ್ ಬಂದಿದ್ದು, 182 ಪಾಸಿಟಿವ್ ಬಂದಿವೆ. 616 ವರದಿಗಳು ಬರುವುದು ಬಾಕಿ ಇದೆ.

ಭಾನುವಾರ ಸೋಂಕಿನ ಲಕ್ಷಣಗಳು ಕಂಡುಬಂದ 29 ಮಂದಿಗೆ ಐಸೊಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೂ 2696 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1943 ಸಕ್ರಿಯ ಪ್ರಕರಣಗಳು ಬಾಕಿ ಇವೆ.


Spread the love