ಅಗಸ್ಟ್ 4 : ಉಡುಪಿ ಜಿಲ್ಲೆಯಲ್ಲಿ ಮತ್ತೆ 170 ಮಂದಿಗೆ ಕೊರೋನಾ ಪಾಸಿಟಿವ್, 1352 ನೆಗೆಟಿವ್

Spread the love

ಅಗಸ್ಟ್ 4 : ಉಡುಪಿ ಜಿಲ್ಲೆಯಲ್ಲಿ ಮತ್ತೆ 170 ಮಂದಿಗೆ ಕೊರೋನಾ ಪಾಸಿಟಿವ್, 1352 ನೆಗೆಟಿವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 170 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4970 ಕ್ಕೆ ಏರಿಕೆಯಾಗಿದೆ.

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 1700 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಮಂಗಳವಾರ 1352 ವರದಿಗಳು ನೆಗೆಟಿವ್ ಬಂದಿದ್ದು, 170 ಪಾಸಿಟಿವ್ ಬಂದಿವೆ. 704 ವರದಿಗಳು ಬರುವುದು ಬಾಕಿ ಇದೆ.

ಮಂಗಳವಾರ ಸೋಂಕಿನ ಲಕ್ಷಣಗಳು ಕಂಡುಬಂದ 53 ಮಂದಿಗೆ ಐಸೊಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೂ 2948 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1980 ಸಕ್ರಿಯ ಪ್ರಕರಣಗಳು ಬಾಕಿ ಇವೆ.


Spread the love