ಅಗಸ್ಟ್ 7 : ಉಡುಪಿ ಜಿಲ್ಲೆಯಲ್ಲಿ 245 ಮಂದಿಗೆ ಕೊರೋನಾ ಪಾಸಿಟಿವ್, 1148 ನೆಗೆಟಿವ್

Spread the love

ಅಗಸ್ಟ್ 7 : ಉಡುಪಿ ಜಿಲ್ಲೆಯಲ್ಲಿ 245 ಮಂದಿಗೆ ಕೊರೋನಾ ಪಾಸಿಟಿವ್, 1148 ನೆಗೆಟಿವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 245 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5605 ಕ್ಕೆ ಏರಿಕೆಯಾಗಿದೆ.

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 1357 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಶುಕ್ರವಾರ 1148 ವರದಿಗಳು ನೆಗೆಟಿವ್ ಬಂದಿದ್ದು, 245 ಪಾಸಿಟಿವ್ ಬಂದಿವೆ. 1203 ವರದಿಗಳು ಬರುವುದು ಬಾಕಿ ಇದೆ.

ಜಿಲ್ಲೆಯಲ್ಲಿ ಇದುವರೆಗೂ 3258 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2292 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಶುಕ್ರವಾರ 5 ಮಂದಿ ಕೋವಿಡ್ ಸೋಂಕಿನಿಂದ ಮೃತರಾಗಿದ್ದು ಜಿಲ್ಲೆಯಲ್ಲಿ ಒಟ್ಟು ಸಾವನಪ್ಪಿದವರ ಸಂಖ್ಯೆ 55 ಕ್ಕೆ ಏರಿಕೆಯಾಗಿದೆ


Spread the love