Home Mangalorean News Kannada News ಅಗಸ್ಟ್ 8 : ಉಡುಪಿ ಜಿಲ್ಲೆಯಲ್ಲಿ ಮತ್ತೆ ಹೆಚ್ಚಿದ ಕೊರೋನಾ; 314 ಮಂದಿಗೆ ಪಾಸಿಟಿವ್, 1379...

ಅಗಸ್ಟ್ 8 : ಉಡುಪಿ ಜಿಲ್ಲೆಯಲ್ಲಿ ಮತ್ತೆ ಹೆಚ್ಚಿದ ಕೊರೋನಾ; 314 ಮಂದಿಗೆ ಪಾಸಿಟಿವ್, 1379 ನೆಗೆಟಿವ್

Spread the love

ಅಗಸ್ಟ್ 8 : ಉಡುಪಿ ಜಿಲ್ಲೆಯಲ್ಲಿ ಮತ್ತೆ ಹೆಚ್ಚಿದ ಕೊರೋನಾ; 314 ಮಂದಿಗೆ ಪಾಸಿಟಿವ್, 1379 ನೆಗೆಟಿವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶನಿವಾರ ಒಟ್ಟು 314 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5919 ಕ್ಕೆ ಏರಿಕೆಯಾಗಿದೆ.

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 2030 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಶನಿವಾರ 1379 ವರದಿಗಳು ನೆಗೆಟಿವ್ ಬಂದಿದ್ದು, 314 ಪಾಸಿಟಿವ್ ಬಂದಿವೆ. 1540 ವರದಿಗಳು ಬರುವುದು ಬಾಕಿ ಇದೆ.

ಜಿಲ್ಲೆಯಲ್ಲಿ ಇದುವರೆಗೂ 3347 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2512 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಶನಿವಾರ 5 ಮಂದಿ ಕೋವಿಡ್ ಸೋಂಕಿನಿಂದ ಮೃತರಾಗಿದ್ದು ಜಿಲ್ಲೆಯಲ್ಲಿ ಒಟ್ಟು ಸಾವನಪ್ಪಿದವರ ಸಂಖ್ಯೆ 60 ಕ್ಕೆ ಏರಿಕೆಯಾಗಿದೆ


Spread the love

Exit mobile version