ಅಗಸ್ಟ್ 9 : ಉಡುಪಿ ಜಿಲ್ಲೆಯಲ್ಲಿ ; 282 ಮಂದಿಗೆ ಕೊರೋನಾ ಪಾಸಿಟಿವ್, 1343 ನೆಗೆಟಿವ್

Spread the love

ಅಗಸ್ಟ್ 9 : ಉಡುಪಿ ಜಿಲ್ಲೆಯಲ್ಲಿ ; 282 ಮಂದಿಗೆ ಕೊರೋನಾ ಪಾಸಿಟಿವ್, 1343 ನೆಗೆಟಿವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾನುವಾರ ಒಟ್ಟು 282 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 6194 ಕ್ಕೆ ಏರಿಕೆಯಾಗಿದೆ.

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 1383 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಭಾನುವಾರ 1343 ವರದಿಗಳು ನೆಗೆಟಿವ್ ಬಂದಿದ್ದು, 282 ಪಾಸಿಟಿವ್ ಬಂದಿವೆ. 1298 ವರದಿಗಳು ಬರುವುದು ಬಾಕಿ ಇದೆ.

ಜಿಲ್ಲೆಯಲ್ಲಿ ಇದುವರೆಗೂ 3444 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2697 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಜಿಲ್ಲೆಯಲ್ಲಿ ಇದುವರೆಗೆ ಕೊರೋನಾದಿಂದ ಒಟ್ಟು 60 ಮಂದಿ ಸಾವನಪ್ಪಿದ್ದಾರೆ


Spread the love