ಅದ್ದೂರಿಯಿಂದ ಜರುಗಿದ ಬೆಳ್ಕಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ
ಉಡುಪಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶಾಲಾ ಹಳೆ ವಿದ್ಯಾರ್ಥಿ ಸಂಘ ಬೆಳ್ಕಳೆ, ಲಕ್ಷ್ಮೀನಗರ ಇದರ ಸಂಯುಕ್ತ ವಾರ್ಷಿಕೋತ್ಸವ ಡಿಸೆಂಬರ್ 20 ರಂದು ಶನಿವಾರ ವಿಜೃಂಭಣೆಯಿಂದ ಜರುಗಿತು.

ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ, ಬಹುಮಾನ ವಿತರಣೆ, ಸಿಹಿತಿಂಡಿ ವಿತರಣೆ ಹಾಗೂ ಛದ್ಮವೇಷ ಸ್ಪರ್ಧೆ ಜರುಗಿತು. ಶಾಲಾ ಆವರಣ ಗೋಡೆ ಉದ್ಘಾಟನೆ ಹಾಗೂ ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೋಭಾ ಡಿ ನಾಯ್ಕ್ ನೆರವೇರಿಸಿದರು. ಈ ವೇಳೆ ಶರತ್ ಶೆಟ್ಟಿ, ರವಿರಾಜ್ ಮಾಲಿನಿ ಜತ್ತನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅರುಣ್ ಕುಮಾರ್ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಪ್ರಶಾಂತ್ ಕುಮಾರ್, ಶಾಲಾ ಮುಖ್ಯೋಪಾಧ್ಯಾಯಿನಿ ವನಿತಾ ಕೆ. ಸ್ಥಳೀಯ ಮಹನೀಯರು ಉಪಸ್ಥಿತರಿದ್ದರು.
ಸಂಜೆ 5.30 ರಿಂದ ಮನೋರಂಜನಾ ಕಾರ್ಯಕ್ರಮ ಜರುಗಿದ್ದು ಅಂಗನವಾಡಿ ಮಕ್ಕಳು, ಶಾಲಾ ಮಕ್ಕಳು, ಮಹಿಳಾ ಮಂಡಳಿಯ ಹಾಗೂ ಹಳೆ ವಿದ್ಯಾರ್ಥಿ ಸಂಘದಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಸಭಾ ಕಾರ್ಯಕ್ರಮದಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೋಭಾ ಡಿ ನಾಯ್ಕ್, ನಗರಸಭಾ ಸದಸ್ಯ ವಿಜಯ್ ಕೊಡವೂರು, ಮತ್ಸ್ಯೋಧ್ಯಮಿ ದಯಾನಂದ ಕುಂದರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅರುಣ್ ಕುಮಾರ್, ಮಹಿಳಾ ಮಂಡಳಿಯ ಅಧ್ಯಕ್ಷರಾದ ಮಮತಾ ಶೆಟ್ಟಿ ಹಾಗೂ ಪ್ರೇಮ ದಯಾನಂದ್, ಶಾಲಾ ನಾಯಕ ಸಮರ್ಥ್ ಯೋಗಿ ಪವಿ ಇಲವೆನ್ ತಂಡದ ಅಧ್ಯಕ್ಷರಾದ ನಿತೇಶ್ಶ ಪೂಜಾರಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಳೆದ ವರ್ಷದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ದಾನಿಗಳಿಗೆ ಸನ್ಮಾನಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ವನಿಕಾ ಕೆ ಸ್ವಾಗತಿಸಿ, ಶಿಕ್ಷಿಕ ಭಾಗೀರಥಿ ಶಾಲಾ ವರದಿ, ವಿದ್ಯಾರ್ಥಿ ಸಂಘದ ವರದಿಯನ್ನು ಗಣೇಶ್ ನಾಯ್ಕ್ ವಾಚಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಶಾರದಾ ಆರ್ಟ್ಸ್ ಕಲಾವಿದರು ಮಂಜೇಶ್ವರ ಇವರಿಂದ ಕಥೆ ಎಡ್ಡೆಂಡು ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು.