Home Mangalorean News Kannada News ಅನರ್ಹ ಪಡಿತರ ಚೀಟಿ: ಸರ್ವೆ ಮಾಡಿ ರದ್ದು ಮಾಡಿ  – ಭರತ್ ಮುಂಡೋಡಿ

ಅನರ್ಹ ಪಡಿತರ ಚೀಟಿ: ಸರ್ವೆ ಮಾಡಿ ರದ್ದು ಮಾಡಿ  – ಭರತ್ ಮುಂಡೋಡಿ

Spread the love

ಅನರ್ಹ ಪಡಿತರ ಚೀಟಿ: ಸರ್ವೆ ಮಾಡಿ ರದ್ದು ಮಾಡಿ  – ಭರತ್ ಮುಂಡೋಡಿ

ಮಂಗಳೂರು:  ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪಲು ಸಂಬಂಧಪಟ್ಟ ಅಧಿಕಾರಿಗಳು ಸಮಗ್ರವಾಗಿ ಕಾರ್ಯನಿರ್ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿಯ ಅಧ್ಯಕ್ಷ ಭರತ್ ಮುಂಡೋಡಿ ಹೇಳಿದರು.

ಅವರು ಸೋಮವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುμÁ್ಠನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅರ್ಹರಲ್ಲದ ಫಲಾನುಭವಿಗಳು ಬಿಪಿಎಲ್ ಕಾರ್ಡ್ ಪಡೆದು ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಅಕ್ಕಿ ಪಡೆಯುತ್ತಿದ್ದಾರೆ. ಇದರಿಂದ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗುತ್ತಿದೆ. ಅರ್ಹರಲ್ಲದ ಹಾಗೂ ಆದಾಯ ಮೀರಿದವರ ಕಾರ್ಡ್‍ಗಳನ್ನು ರದ್ದುಗೊಳಿಸುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಅನರ್ಹ ಫಲಾನುಭವಿಗಳು ಸರ್ಕಾರದ ಸವಲತ್ತುಗಳನ್ನು ಪಡೆಯುತ್ತಿರುವುದರಿಂದ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಅವಿಭಕ್ತ ಕುಟುಂಬಗಳ ಮನೆಗಳಿಗೆ ನೇರವಾಗಿ ಭೇಟಿ ನೀಡಿ ಸರ್ವೆ ಮಾಡಿ ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಸೂಚಿಸಿದರು.

ಗೃಹಲಕ್ಷ್ಮಿ ಯೋಜನೆಯಡಿ ಕಳೆದ ಒಂದು ತಿಂಗಳಲ್ಲಿ ಹೊಸದಾಗಿ 92 ಫಲಾನುಭವಿಗಳು ನೋಂದಾಯಿಸಿಕೊಂಡಿರುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

ಶಕ್ತಿ ಯೋಜನೆಯಡಿ ಹೆಚ್ಚುವರಿಯಾಗಿ ವಾಹನ, ಚಾಲಕರು ಮತ್ತು ಸಿಬ್ಬಂದಿಗಳನ್ನು ನೀಡಿದರೂ ಕೂಡ ಬಸ್ಸುಗಳನ್ನು ನಿಲುಗಡೆ ಮಾಡಲು ಡಿಪೆÇ್ಪೀದ ಅನಿವಾರ್ಯತೆ ಇರುತ್ತದೆ. ಮಂಗಳೂರು ತಾಲೂಕಿನಲ್ಲಿ 5 ಘಟಕಗಳಿದ್ದು ಪ್ರತಿ ಘಟಕದಿಂದ 130 ಅನುಸೂಚಿಗಳನ್ನು ಕಾರ್ಯಾಚರಿಸಲಾಗುತ್ತಿದೆ. ಮುಡುಪಿನಲ್ಲಿ ಘಟಕ ಪ್ರಾರಂಭಿಸುವ ಬಗ್ಗೆ ಈಗಾಗಲೇ ಸರ್ಕಾರಕ್ಕೆ, ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆಯಂದು ಮಂಗಳೂರು ವಿಭಾಗದ ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ಇವರು ಸಭೆಗೆ ಮಾಹಿತಿ ನೀಡಿದರು. ಮಂಗಳೂರು ಮತ್ತು ಪುತ್ತೂರು ವಿಭಾಗ ಸೇರಿ ಚಾಲನಾ ಸಿಬ್ಬಂದಿಗಳ ನೇಮಕಾತಿಯಾಗಿದ್ದು, ಗೈರು ಹಾಜರಾದ ಸಿಬ್ಬಂದಿಗಳಿಗೆ ನೋಟೀಸ್ ಜಾರಿ ಮಾಡಿ ಅವರನ್ನು ಕರ್ತವ್ಯದಿಂದ ತೆಗೆಯುವ ಪ್ರಕ್ರಿಯೆ ಜಾರಿಯಲ್ಲಿದ್ದು, ಶೀಘ್ರವಾಗಿ ಕ್ರಮವಹಿಸುವಂತೆ ಅಧ್ಯಕ್ಷರು ಸೂಚಿಸಿದರು.

ಮೆಸ್ಕಾಂನ ಪ್ರತೀ ಉಪವಿಭಾಗ ವ್ಯಾಪ್ತಿಯ 24×7 ಸೇವಾ ಕೇಂದ್ರಗಳಲ್ಲಿ ವಾಹನದ ವ್ಯವಸ್ಥೆಯನ್ನು ಈಗಾಗಲೇ ಕಲ್ಪಿಸಲಾಗಿದ್ದು, ತುರ್ತು ಸಂದರ್ಭಗಳಲ್ಲಿ ಉಪವಿಭಾಗಗಳ ವ್ಯಾಪ್ತಿಯಲ್ಲಿ ಬಳಸಲು ಸೂಚಿಸಲಾಗಿರುತ್ತದೆ. ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 6,776 ಮಂದಿ ನೋಂದಣಿ ಮಾಡಿಕೊಂಡಿದ್ದು, 5,828 ಅಭ್ಯರ್ಥಿಗಳಿಗೆ ಡಿಬಿಟಿ ಪಾವತಿ ಆಗಿರುತ್ತದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ದ. ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ಜಿಲ್ಲಾ ಪಂಚಾಯತ್ ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಸುμÁ್ಮ ಕೆ. ಎಸ್ , ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿ ಉಪಾಧ್ಯಕ್ಷರಾದ ಜೋಕಿಂ ಡಿಸೋಜಾ, ಸುರೇಖಾ ಚಂದ್ರಹಾಸ್, ನಾರಾಯಣ ನಾಯಕ್, ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಆಲ್ವಿನ್ ಕ್ಲೆಮೆಂಟ್ ಕುಟಿನ್ಹ, ಜಯಂತಿ ಬಿಎ, ಶಾ ಹುಲ್ ಹಮೀದ್, ಉಮಾನಾಥ್ ಶೆಟ್ಟಿ, ಬಿ ಪದ್ಮನಾಭ ಸಾಲ್ಯಾನ್, ಸುರೇಂದ್ರ ಕಂಬಳಿ, ಎಸ್ ರಫೀಕ್, ಆಲಿಸ್ಟನ್ ಕ್ಲೈವ್ ಡಿ ಕುನ್ಹ ಮತ್ತಿತರರು ಉಪಸ್ಥಿತರಿದ್ದರು


Spread the love

Exit mobile version