Home Mangalorean News Kannada News ಅಪಘಾತದ ಗಾಯಾಳುಗಳನ್ನು ತನ್ನ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಉಡುಪಿ ಜಿಲ್ಲಾಧಿಕಾರಿ

ಅಪಘಾತದ ಗಾಯಾಳುಗಳನ್ನು ತನ್ನ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಉಡುಪಿ ಜಿಲ್ಲಾಧಿಕಾರಿ

Spread the love

ಅಪಘಾತದ ಗಾಯಾಳುಗಳನ್ನು ತನ್ನ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಉಡುಪಿ ಜಿಲ್ಲಾಧಿಕಾರಿ

ಕಾಪು: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೊಳಗಾಗಿ, ಗಾಯಗೊಂಡಿದ್ದ ಗಾಯಗಳುಗಳನ್ನು ತನ್ನದೇ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸುವ ಮೂಲಕ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮಾನವೀಯತೆ ಮೆರೆದಿದ್ದಾರೆ.

ಕಾಪು ವಿದ್ಯಾನಿಕೇತನ ಶಿಕ್ಷಣ ಸಂಸ್ಥೆ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕ್ ಗಳ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದರು. ಈ ವೇಳೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತಿದ್ದ ಜಿಲ್ಲಾಧಿಕಾರಿಗಳು, ತಮ್ಮ ವಾಹನ ನಿಲ್ಲಿಸಿದರು. ಗಾಯಗೊಂಡ ಸವಾರರನ್ನು ಕೂಡಲೇ ತಮ್ಮ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸು ವಂತೆ ಅವರು ಸಿಬ್ಬಂದಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಸಿಬ್ಬಂದಿಗಳು ಅವರನ್ನು ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಿ ಹಿಂತಿರುಗಿ ಬರುವವರಿಗೆ ಅಪಘಾತ ನಡೆದ ಸ್ಥಳದಲ್ಲಿದ್ದು ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿಯ ಈ ನಡೆ ಸಾರ್ವಜನಿಕ ಪ್ರಶಂಸೆಗೆ ಪಾತ್ರವಾಯಿತು.


Spread the love

Exit mobile version