Home Mangalorean News Kannada News ಅಪಘಾತ ತಡೆಗಟ್ಟಲು ವಿಶೇಷ ಕಾರ್ಯಾಚರಣೆ: ರಾಷ್ಟ್ರೀಯ ಹೆದ್ದಾರಿ 169 ರಸ್ತೆಗೆ ಹೆಚ್ಚುವರಿಯಾಗಿ ಹೈವೇ ಪೆಟ್ರೋಲ್ ವಾಹನದ...

ಅಪಘಾತ ತಡೆಗಟ್ಟಲು ವಿಶೇಷ ಕಾರ್ಯಾಚರಣೆ: ರಾಷ್ಟ್ರೀಯ ಹೆದ್ದಾರಿ 169 ರಸ್ತೆಗೆ ಹೆಚ್ಚುವರಿಯಾಗಿ ಹೈವೇ ಪೆಟ್ರೋಲ್ ವಾಹನದ ನಿಯೋಜನೆ

Spread the love

ಅಪಘಾತ ತಡೆಗಟ್ಟಲು ವಿಶೇಷ ಕಾರ್ಯಾಚರಣೆ: ರಾಷ್ಟ್ರೀಯ ಹೆದ್ದಾರಿ 169 ರಸ್ತೆಗೆ ಹೆಚ್ಚುವರಿಯಾಗಿ ಹೈವೇ ಪೆಟ್ರೋಲ್ ವಾಹನದ ನಿಯೋಜನೆ

ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಕಳೆದ ಒಂದು ವಾರದ ಅವಧಿಯಲ್ಲಿ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುವವರು ಮತ್ತು Wrong Side ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ದ್ವಿಚಕ್ರ ವಾಹನಗಳಿಗೆ ಸಂಬಂಧಿಸಿದ ಅಪಘಾತಗಳಲ್ಲಿ ತಲೆಗೆ ಗಂಭೀರ ಗಾಯಗಳಾಗಿ ಸಾವನ್ನಪ್ಪುವ ಹಾಗೂ ಗಂಭೀರವಾಗಿ ಗಾಯಗೊಳ್ಳುವ ಪ್ರಕರಣಗಳು ಹೆಚ್ಚುತ್ತಿರುವುದಾಗಿದೆ. ಇದೇ ರೀತಿಯಾಗಿ, ಸಮಯ ಉಳಿಸುವ ಉದ್ದೇಶದಿಂದ ಅಥವಾ ಸಂಚಾರ ನಿಯಮಗಳನ್ನು ಉಲ್ಲಂಘಿಸಿ Wrong Side ವಾಹನ ಚಲಾಯಿಸುವುದರಿಂದ ಮುಖಾಮುಖಿ ಡಿಕ್ಕಿ, ಪಾದಚಾರಿಗಳಿಗೆ ಅಪಾಯ ಹಾಗೂ ಇತರೆ ವಾಹನಗಳಿಗೆ ತೊಂದರೆಯಾಗುವ ಘಟನೆಗಳು ನಡೆಯುತ್ತಿದೆ.

ಈ ಹಿನ್ನೆಲೆಯಲ್ಲಿ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನ ಹಾಗೂ ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶೇಷ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಚರಣೆಯ ವೇಳೆ ನಗರದ ಪ್ರಮುಖ ಜಂಕ್ಷನ್ಗಳು, ಎನ್.ಹೆಚ್.-66 ಮತ್ತು 169 ಹೆದ್ದಾರಿಗಳಲ್ಲಿ, ನಗರದ ಹೊರವಲಯಗಳಲ್ಲಿ ಹಾಗೂ ಅಪಘಾತ ಹೆಚ್ಚಾಗಿ ಸಂಭವಿಸುವ ಸ್ಥಳಗಳಲ್ಲಿ ವಿಶೇಷ ತಪಾಸಣೆ ನಡೆಸಿ ಪ್ರಕರಣ ದಾಖಲಿಸಲಾಯಿತು.

ಕಾರ್ಯಾಚರಣೆಯ ಸಂದರ್ಭದಲ್ಲಿ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸಿದವರ ವಿರುದ್ಧ 1050 ಪ್ರಕರಣಗಳನ್ನು ದಾಖಲಿಸಿದ್ದು, ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ಒಟ್ಟು ₹ 4,63,500/- ದಂಡ ವಿಧಿಸಲಾಗಿದೆ. ಅದೇ ರೀತಿ, Wrong Side ವಾಹನ ಚಲಾಯಿಸಿದ 322 ಪ್ರಕರಣಗಳು ಪತ್ತೆಯಾಗಿದ್ದು, ಸದರಿ ವಾಹನ ಸವಾರರಿಗೆ ಒಟ್ಟು ₹1,61,000/- ದಂಡ ವಿಧಿಸಲಾಗಿರುತ್ತದೆ. ಈ ವಿಶೇಷ ಕಾರ್ಯಾಚರಣೆಯಲ್ಲಿ ಒಟ್ಟು ದ್ವಿ-ಚಕ್ರ ವಾಹನಗಳ 1372 ವಿರುದ್ದ ಪ್ರಕರಣಗಳನ್ನು ದಾಖಲಿಸಲಾಗಿದೆ.

ಅಲ್ಲದೇ ರಾಷ್ಟೀಯ ಹೆದ್ದಾರಿ-169 (ಬಿಕರ್ನಕಟ್ಟೆ – ಮೂಡಬಿದ್ರೆ – ಬೆಳುವಾಯಿ ರಸ್ತೆ) ಯಲ್ಲಿ ನಡೆಯುವ ರಸ್ತೆ ಅಪಘಾತ ಪ್ರಕರಣಗಳಲ್ಲಿ ಶೀಘ್ರವಾಗಿ ಸ್ಪಂದಿಸಲು, ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸಲು ಹಾಗೂ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎನ್.ಹೆಚ್.-169 ಹೆದ್ದಾರಿಯ ಬೈತುರ್ಲಿಯಿಂದ ಮೀಜಾರ್ ವರೆಗೆ ಹೆಚ್ಚುವರಿಯಾಗಿ ಹೈವೇ ಪೆಟ್ರೋಲ್ ವಾಹನವನ್ನು ನಿಯೋಜಿಸಲಾಗಿದೆ. (ಸುಮಾರು 20 ಕೀ.ಮೀ) ಮೂಡಬಿದ್ರೆ ಠಾಣಾ ಸರಹದ್ದಿನಲ್ಲಿ ಹಾದು ಹೋಗುವ ರಾ.ಹೆ ಯಲ್ಲಿ ಈಗಾಗಲೇ ಒಂದು ಹೈವೇ ಪ್ರಟ್ರೋಲ್ ವಾಹನವು ಕಾರ್ಯಾಚರಣೆಯನ್ನು ನಡೆಸುತ್ತಿರುತ್ತದೆ. ಈ ವಾಹನಗಳು ನಿಗದಿಪಡಿಸಿದ ಕಾರ್ಯವ್ಯಪ್ತಿಯೊಳಗೆ 24*7 ಕಾಲ ಕರ್ತವ್ಯದಲ್ಲಿರುತ್ತದೆ.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version