Home Mangalorean News Kannada News ಅಪ್ರಾಪ್ತ ಗರ್ಭಿಣಿಯರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ: ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ದ.ಕ. ಜಿಲ್ಲಾ ಆರೋಗ್ಯ ಇಲಾಖೆ...

ಅಪ್ರಾಪ್ತ ಗರ್ಭಿಣಿಯರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ: ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ದ.ಕ. ಜಿಲ್ಲಾ ಆರೋಗ್ಯ ಇಲಾಖೆ ಸೂಚನೆ

Spread the love

ಅಪ್ರಾಪ್ತ ಗರ್ಭಿಣಿಯರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ: ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ದ.ಕ. ಜಿಲ್ಲಾ ಆರೋಗ್ಯ ಇಲಾಖೆ ಸೂಚನೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸ್ಕ್ಯಾನಿಂಗ್‌ಗೆ ಬರುವ ಗರ್ಭಿಣಿಯರ ವಯಸ್ಸಿನ ಬಗ್ಗೆ ದಾಖಲೆಗಳನ್ನು ಪರಿಶೀಲಿಸಬೇಕು. 18 ವಷರ್ದೊಳಗಿನ ಗರ್ಭಿಣಿಯರು ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.

ಜಿಲ್ಲಾ ಆರೋಗ್ಯ ಅಧಿಕಾರಿ ಕಚೇರಿಯಲ್ಲಿ ಡಾ.ಅಮೃತಾ ಭಂಡಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಲಹಾ ಸಮಿತಿಯ ಸಭೆ ನಡೆಯಿತು.

2026ರಲ್ಲಿ ಎಪ್ರಿಲ್‌ನಿಂದ ಜೂನ್‌ವರೆಗೆ ದಕ ಜಿಲ್ಲೆಯಲ್ಲಿ 2911 ಗಂಡು, 2872 ಹೆಣ್ಣು ಮಕ್ಕಳ ಜನನವಾಗಿದ್ದು, ಲಿಂಗಾನುಪಾತ 987 ಇದೆ ಎಂದು ಸಭೆಗೆ ತಿಳಿಸಲಾಯಿತು.

ಸಭೆಯಲ್ಲಿ ಹೊಸದಾಗಿ ಸ್ಕ್ಯಾನಿಂಗ್ ಉಪಕರಣಗಳನ್ನು ಖರೀದಿಸಿದ ಸಂಸ್ಥೆಗಳ ಅರ್ಜಿಗಳನ್ನು ಪರಿಶೀಲಿಸಲಾ ಯಿತು. ಸಲಹಾ ಸಮಿತಿಯು ಆಸ್ಪತ್ರೆಗೆ ತಪಾಸಣೆಗೆ ಭೇಟಿ ನೀಡಿದ ಸಂದರ್ಭ ಕಂಡುಬಂದ ನ್ಯೂನತೆಗಳ ಕುರಿತು ಚರ್ಚಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶು ಆಸ್ಪತ್ರೆ ಹಾಗೂ ಕ್ಲಿನಿಕ್‌ಗಳು ‘‘ಪ್ರಾಣಿಗಳಿಗೆ ಮಾತ್ರ ಸ್ಕ್ಯಾನ್’’ ಎಂಬ ಫಲಕವನ್ನು ತಮ್ಮ ಸಂಸ್ಥೆಯಲ್ಲಿ ಪ್ರದರ್ಶನ ಮಾಡಲು ಹಾಗೂ ಪ್ರಾಣಿಗಳನ್ನು ಹೊರತುಪಡಿಸಿ ಮನುಷ್ಯರಿಗೆ ಸ್ಕ್ಯಾನ್ ಮಾಡಲಾಗುವುದಿಲ್ಲ ಎಂಬ ನೋಟರಿ ಆಫಿದಾವಿತ್‌ನ್ನು ಸಂಸ್ಥೆಯವರು ನೀಡಬೇಕಾಗಿ ಸಭೆಯಲ್ಲಿ ನಿರ್ಣಯಿಸಲಾಯಿತು.

ಏಪ್ರಿಲ್ 2025 ರಿಂದ ಮಾರ್ಚ್ 2026 ರವರೆಗೆ ಖಾಸಗಿ 681 ಹಾಗೂ ಸರಕಾರಿ 39 ಸ್ಕ್ಯಾನಿಂಗ್‌ಸೆಂಟರ್‌ಗಳ ತಪಾಸಣೆ ನಡೆಸಲಾಗಿರುತ್ತದೆ.

ತಾಲೂಕು ಆರೋಗ್ಯಾಧಿಕಾರಿಗಳು ಖಾಸಗಿ 75 ಹಾಗೂ ಸರಕಾರಿ 9 ಸ್ಕ್ಯಾನಿಂಗ್ ಸೆಂಟರ್‌ಗಳ ತಪಾಸಣೆ ನಡೆಸಿದ್ದಾರೆ ಎಂದು ಜಿಲ್ಲಾ ಅನುಷ್ಠಾನ ಅಧಿಕಾರಿ ಡಾ.ದೀಪಾ ಪ್ರಭು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಸಲಹಾ ಸಮಿತಿ (ಪಿಸಿಪಿಎನ್‌ಡಿಟಿ) ಸದಸ್ಯರಾದ ಅನಿತ್‌ರಾಜ್, ಡಾ.ಸುಂದರಿ,ಡಾ. ನಂಜೇಶ್ ಕುಮಾರ್, ಡಾ. ರಘುರಾಜ್, ಡಾ. ಭಾರತಿ ಪ್ರಕಾಶ್, ಡಾ.ಚಿದಾನಂದ ಮೂರ್ತಿ, ಬಿ.ಎ ಖಾದರ್ ಶಾ, ವಸಂತ ಪೆರಾಜೆ ಮತ್ತಿತರರು ಉಪಸ್ಥಿತರಿದ್ದರು.


Spread the love

Exit mobile version