ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರ – ಆರೋಪಿ ತಂದೆಯ ಬಂಧನ

Spread the love

 ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರ – ಆರೋಪಿ ತಂದೆಯ ಬಂಧನ

ಬಂಟ್ವಾಳ: ಅಪ್ರಾಪ್ತ ವಯಸ್ಸಿನ ಮಗಳನ್ನು ಅತ್ಯಾಚಾರ ಎಸಗಿದ ಆರೋಪದಲ್ಲಿ ತಂದೆಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು ಅಸ್ವಸ್ಥಗೊಂಡಿರುವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಎಂಬಲ್ಲಿ ಈ ಘಟನೆ ನಡೆದಿದ್ದು, ಆರೋಪಿ ತಂದೆಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮೂರು ವರ್ಷಗಳಿಂದ ನಿರಂತರವಾಗಿ ಮಗಳನ್ನು ಅತ್ಯಾಚಾರಗೈಯುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಮನೆಯಲ್ಲಿ ಯಾರು ಇಲ್ಲದ ವೇಳೆ ಅತ್ಯಾಚಾರ ಎಸಗಿದ್ದು ಈ ವೇಳೆ ಬಾಲಕಿ ಅಸ್ವಸ್ಥಗೊಂಡಿದ್ದಾಳೆನ್ನಲಾಗಿದೆ. ಈ ಹಿನ್ನಲೆಯಲ್ಲಿ ಬಾಲಕಿಯನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದಾಗ ವಿಚಾರ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love