ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಯತ್ನ – ಆರೋಪಿಯ ಬಂಧನ

Spread the love

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಯತ್ನ – ಆರೋಪಿಯ ಬಂಧನ

ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವನನ್ನು ಧರ್ಮಸ್ಥಳ ಪೋಲಿಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

umesh-rape-case-accused-01

ಬಂಧಿತನನ್ನು ನಿಡ್ಲೆ ನಿವಾಸಿ ರಿಕ್ಷಾ ಚಾಲಕ ಉಮೇಶ್ (25) ಎಂದು ಗುರುತಿಸಲಾಗಿದೆ.
ಬಾಲಕಿಯು ನಾಲ್ಕನೇ ತರಗತಿಯ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದ್ದು, ಡಿಸೆಂಬರ್ 24ರಂದು ನಿಡ್ಲೆ ಗ್ರಾಮದ ಮಾಪಲಾಜೆ ಎಂಬಲ್ಲಿ ಬಾಲಕಿ ಒಬ್ಬಳೇ ಇದ್ದ ಸಮಯ ಆರೋಪಿಯು ಮನೆಗೆ ಅಕ್ರಮ ಪ್ರವೇಶ ಮಾಡಿ ಬಾಲಕಿ ಮಾನಭಂಗಕ್ಕೆ ಯತ್ನಿಸಿದ್ದು, ಈ ಬಗ್ಗೆ ಬಾಲಕಿಯ ತಾಯಿಯು ದೂರು ನೀಡಿದ್ದಾರೆ.

ಆರೋಪಿಯ ವಿರುದ್ದ ಧರ್ಮಸ್ಥಳ ಪೋಲಿಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ


Spread the love