Home Mangalorean News Kannada News ಅಲ್ಪಸಂಖ್ಯಾತರ ಸಾಮೂಹಿಕ ವಿವಾಹ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಸಾಮೂಹಿಕ ವಿವಾಹ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Spread the love

ಅಲ್ಪಸಂಖ್ಯಾತರ ಸಾಮೂಹಿಕ ವಿವಾಹ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಮಂಗಳೂರು: ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಸಮುದಾಯದ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50000 ರೂ. ಹಾಗೂ ಸಾಮೂಹಿಕ ವಿವಾಹವನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗಳಿಗೆ 5000 ರೂ. ನೀಡಲಾಗುತ್ತದೆ.

ಸಾಮೂಹಿಕ ವಿವಾಹವನ್ನು ಏರ್ಪಡಿಸುವ ಆಯೋಜಕರುಗಳು ಕಾರ್ಯಕ್ರಮದ 7 ದಿನ ಮುಂಚಿತವಾಗಿ ಕಾರ್ಯಕ್ರಮ ಆಯೋಜನೆಯ ಬಗ್ಗೆ ಅರ್ಜಿ ಸಲ್ಲಿಸಬೇಕು. ಮತ್ತು ವಿವಾಹ ನಡೆದ ದಿನಾಂಕದ 3 ದಿನಗಳೊಳಗಾಗಿ ಅಗತ್ಯ ದಾಖಲಾತಿಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್ಸೈಟ್ https://dom.karnataka.gov.in ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version