ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಹುಮಾನ ಚೆಕ್ ವಿತರಣೆ

Spread the love

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಹುಮಾನ ಚೆಕ್ ವಿತರಣೆ
ಉಡುಪಿ:ಮುಖ್ಯಮಂತ್ರಿಗಳ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಯಡಿ ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಜಿಲ್ಲೆಯ 22 ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕರ ಬಹುಮಾನವನ್ನು ವಿತರಿಸಿದರು.

ರಾಜ್ಯದ ಒಟ್ಟು 250 ವಿದ್ಯಾರ್ಥಿಗಳು ಈ ಬಹುಮಾನಕ್ಕೆ ಭಾಜನರಾಗಿದ್ದು, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು 10,000 ರೂ.ಗಳನ್ನು ಪಡೆದರೆ, ಪಿಯುಸಿಯವರಿಗೆ 20,000 ರೂ.ಗಳನ್ನು ನೀಡಲಾಗುವುದು.

ಜಿಲ್ಲೆಯ ಸರ್ಕಾರಿ ಉರ್ದು ಶಾಲೆಗಳಿಗೆ 9 ಅಂಶಗಳ ಕಾರ್ಯಕ್ರಮದಡಿ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಬಹುಮಾನ ಚೆಕ್‍ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಹರೀಶ್ ಗಾಂವ್ಕರ್ ಇದ್ದರು.


Spread the love