ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ – ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಡಿಜಿಟಲ್ ಯೂತ್ ಕಾರ್ಯಕರ್ತರಿಗೆ ಮಂಜುನಾಥ್ ಭಂಡಾರಿ ಸಲಹೆ

Spread the love

ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ – ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಡಿಜಿಟಲ್ ಯೂತ್ ಕಾರ್ಯಕರ್ತರಿಗೆ ಮಂಜುನಾಥ್ ಭಂಡಾರಿ ಸಲಹೆ

ಉಡುಪಿ: ಸಿಕ್ಕಿದ ಅವಕಾಶವನ್ನು ಉಪಯೋಗಿಸಿಕೊಂಡಾಗ ನಾಯಕನಾಗಲು ಸಾಧ್ಯ ಆದ್ದರಿಂದ ಡಿಕೆ ಶಿವಕುಮಾರ್ ಅವರ ಪದಗ್ರಹಣ ಸಮಾರಂಭ ಯವ ಕಾಂಗ್ರೆಸ್ ಕಾರ್ಯಕರ್ತರಿಗೆ ನಾಯಕರಾಗಲು ಸಿಕ್ಕರುವ ಅವಕಾಶ ಎಂದು ತಿಳಿದು ಅದನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ಮಂಜುನಾಥ್ ಭಂಡಾರಿ ಹೇಳಿದರು.

ಅವರು ಮಂಗಳವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜುಲೈ 2ರಂದು ನಡೆಯಲಿರುವ ಪ್ರತಿಜ್ಞಾ ಕಾರ್ಯಕ್ರಮದ ಪೂರ್ವಭಾವಿಯಾಗಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಡಿಜಿಟಲ್ ಯೂತ್ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಯಾವುದೇ ವ್ಯಕ್ತಿಗೆ ರಾಜಕೀಯದಲ್ಲಿ ಪಕ್ಷ ಮುಖ್ಯವಾಗಬೇಕೇ ಹೊರತು ವ್ಯಕ್ತಿ ಮುಖ್ಯವಲ್ಲ. ಪಕ್ಷಕ್ಕೆ ಮಹತ್ವ ನೀಡಿದಾಗ ಅಧಿಕಾರ ತನ್ನಿಂದ ತಾನೇ ಬರುತ್ತದೆ ಆಗ ಆ ವ್ಯಕ್ತಿ ಉತ್ತಮ ನಾಯಕರಾಗಿ ಬೆಳೆಯಲು ಸಾಧ್ಯವಿದೆ. ಯುವಕರು ತಾವು ನಾಯಕನಾಗಲು ಪ್ರಯತ್ನಿಸಬೇಕೆ ಹೊರತು ಬೆಂಬಲಿಗನಾಗಿ ಉಳಿಯಬಾರದು. ಡಿ ಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ನಮಗೆ ಕೆಲಸ ಮಾಡಲು ಸಿಕ್ಕ ಅವಕಾಶ ಎಂದು ಅರಿತು ಪ್ರತಿಯೊಬ್ಬ ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ತಮ್ಮ ನಾಯಕತ್ವ ತೋರಿಸಬೇಕು. ಜನರಿಗೆ ಯಾವುದರ ಅವಶ್ಯಕತೆ ಇದೆ ಎನ್ನುವುದನ್ನು ಅರಿತು ಕೆಲಸ ಮಾಡಿ ಅವರಿಗೆ ಸ್ಪಂದಿಸಿದಾಗ ತನ್ನಿಂದ ತಾನೇ ನಮ್ಮಲ್ಲಿ ನಾಯಕನಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ ವಿದ್ಯಾರ್ಥಿ ದೆಸೆಯಿಂದ ಪಕ್ಷದಲ್ಲಿ ಸಿಕ್ಕ ಅವಕಾಶವನ್ನು ಪಡೆದು ಅದನ್ನು ಸದುಪಯೋಗಪಡಿಸಿಕೊಂಡ ಪರಿಣಾಮ ಇಂದು ತಾನು ಈ ಹಂತಕ್ಕೆ ಬೆಳೆಯಲು ಸಾಧ್ಯವಾಗಿದೆ. ಅದೇ ರೀತಿಯಲ್ಲಿ ನಾಯಕತ್ವವನ್ನು ತೋರಿದ ಡಿ ಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಯುವಕರು ಸಾಮಾಜಿಕ ಜಾಲತಾಣಗಳ ಮೂಲಕ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಯಶಸ್ವಿ ಯಾಗಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.

ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರಕಾರ ಜನವಿರೋಧಿ ನೀತಿಗಳನ್ನು ಮುಂದುವರೆಸಿಕೊಂಡು ಬಂದಿದ್ದು ಜನರನ್ನು ಕೇವಲ ಮರಳು ಮಾಡುವ ಕೆಲಸ ಮಾಡಿಕೊಂಡು ಬಂದಿದೆ. ಯಾವುದೇ ಪೂರ್ವ ತಯಾರಿ ಮಾಡದೇ ಲಾಕ್ ಡೌನ್ ಹೇರಿದ್ದರ ಪರಿಣಾಮ ಲಕ್ಷಾಂತರ ವಲಸೆ ಕಾರ್ಮಿಕರು ಸೂಕ್ತ ವ್ಯವಸ್ಥೆಯಿಲ್ಲದೆ ಪರದಾಡಬೇಕಾಯಿತು. ಯುವಕರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ ಮೋದಿ ಯುವಕರನ್ನು ದಾರಿತಪ್ಪಿಸಿದೆ ಇದನ್ನು ಜನರಿಗೆ ಮನದಟ್ಟು ಮಾಡುವ ಕೆಲಸವನ್ನು ಯುವ ಸಮುದಾಯ ಸಾಮಾಜಿಕ ಜಾಲತಾಣಗಳ ಮೂಲಕ ಮಾಡಬೇಕು ಎಂದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್ ಪ್ರಾಸ್ತಾವಿಕವಾಗಿ ಮಾತನಾಡಿ ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರಕಾರ ದ್ವೇಷ ರಾಜಕಾರಣ ಮಾಡಿಕೊಂಡು ಬಂದಿದ್ದು ಡಿಕೆ ಶಿವಕುಮಾರ್ ಅವರ ಪದಗ್ರಹಣಕ್ಕೆ ಹಲವು ರೀತಿಯಲ್ಲಿ ಸಮಸ್ಯೆ ಒಡ್ಡಿಕೊಂಡು ಬಂದಿದ್ದು ಕೊನೆಗೂ ಜುಲೈ 2 ರಂದು ಸಮಯ ನಿಗದಿಗೊಂಡಿದೆ. ಡಿ ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಯುವ ಸಮುದಾಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಡಿಕೆ ಶಿವಕುಮಾರ್ ಅವರು ಬಿಜೆಪಿಗರ ಪಾಲಿಗೆ ಒಂದು ರೀತಿಯ ಬೆಂಕಿ ಚೆಂಡಾಗಿ ಪರಿಣಮಿಸಿದೆ.

ಜಿಲ್ಲಾ ಹಂತದಲ್ಲಿ ಯುವ ಕಾಂಗ್ರೆಸ್ ಬಹುಕೋಟಿ ಮರಳು ಹಗರಣದ ವಿರುದ್ದ ಬೃಹತ್ ಮಟ್ಟದ ಹೋರಾಟವನ್ನು ಕೈಗೊಂಡಿದ್ದು ಜಿಲ್ಲಾಧಿಕಾರಿಗಳ ವಿರುದ್ದ ಲೋಕಾಯುಕ್ತದಲ್ಲಿ ಪ್ರಕರಣ ದಾಖಲು ಮಾಡುವಲ್ಲಿ ಯಶಸ್ವಿಯಾಗಿದೆ. ಜಿಲ್ಲಾಧಿಕಾರಿಗಳು ತಾನೋಬ್ಬ ಅಧಿಕಾರಿ ಎನ್ನುವುದನ್ನು ಮರೆತು ಹೇಳಿಕೆ ನೀಡುತ್ತಿರುವುದು ಸಂಶಯಕ್ಕೆ ಕಾರಣವಾಗುತ್ತದೆ. ಅಧಿಕಾರಿಯಾಗಿರುವವರು ಪಕ್ಷದ ವಕ್ತಾರರಂತೆ ವರ್ತಿಸುವುದು ಸರಿಯಲ್ಲ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಹರೀಶ್ ಕಿಣಿ, ಮಾಜಿ ಶಾಸಕ ಯು ಆರ್ ಸಭಾಪತಿ, ನಾಯಕರಾದ ಅನಿಲ್ ಕುಮಾರ್, ನವೀನ್ ಡಿಸೋಜಾ, ವಸಂತ್ ಬರ್ನಾಡ್, ವಿನಯ್ ರಾಜ್, ಅಖಿಲೇಶ್ ಕೋಟ್ಯಾನ್, ಉಮ್ಮರ್ ಫಾರೂಕ್ , ದೀಪಕ್ ಕೊಟ್ಯಾನ್ ಹಾಗೂ ಇತರರು ಉಪಸ್ಥಿತರಿದ್ದರು


Spread the love