ಅಸಿಡ್ ದಾಳಿ ಆರೋಪಿಯನ್ನು ಬಂಧಿಸಿದ ಪೊಲೀಸರು

Spread the love

ಅಸಿಡ್ ದಾಳಿ ಆರೋಪಿಯನ್ನು ಬಂಧಿಸಿದ ಪೊಲೀಸರು

ಮಂಗಳೂರು: ಪತ್ನಿ ಹಾಗೂ ಆಕೆಯ ಸಂಬಂಧಿ ಮೇಲೆ ಆಸಿಡ್ ದಾಳಿ ನಡೆಸಿದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಬಿಜು ಥೋಮಸ್ ಎಂದು ಗುರುತಿಸಲಾಗಿದೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ನೆಲ್ಯಾಡಿ ಕೊಣಾಲು ಗ್ರಾಮದ ನಿವಾಸಿ ಶ್ರೀಮತಿ ಶೈನಿ ಮತ್ತು ಅವರ ಸಂಬಂದಿ ಝಾನ್ಸಿ ಎಂಬವರುಗಳ ಮೇಲೆ ನಡೆದ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 341,504,506,326(A), 307 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ ಶ್ರೀಮತಿ ಶೈನಿರವರ ಗಂಡ ಆರೋಪಿ ಬಿಜು ಥೊಮಸ್ ಎಂಬಾತನನ್ನು ಆರೋಪಿಯು ಪರಾರಿಯಾಗುವ ಉದ್ದೇಶದಿಂದ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯಿದ್ದಾಗ ಈ ದಿನ ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳು ಪುತ್ತೂರು ವೃತ್ತಕಛೇರಿಯ ಸಿಬ್ಬಂದಿಗಳೊಂದಿಗೆ ಕಾರ್ಯಾಚರಣೆ ನಡೆಸಿ ಬಂದಿಸಿದ್ದು, ಆರೋಪಿಯು ಕೌಟುಂಬಿಕ ಕಲಹಕ್ಕೆ ಸಂಭಂದಿಸಿದಂತೆ ದ್ವೇಷದಿಂದ ಕೊಲ್ಲುವ ಉದ್ದೇಶದಿಂದ ಈ ಕೃತ್ಯ ನಡೆಸಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದ್ದು ತನಿಖೆ ಪ್ರಗತಿಯಲ್ಲಿದೆ.


Spread the love